ಉದಯವಾಹಿನಿ, ಬೆಂಗಳೂರು: ಪೆಟ್ರೋಲ್, ಡೀಸೆಲ್ ದರ ಏರಿಕೆಯ ಬೆನ್ನಲ್ಲೇ ಬಸ್ ಟಿಕೆಟ್ ದರದ ಏರಿಕೆಯ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಪರೋಕ್ಷ ಸುಳಿವು ನೀಡಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನಸಾಮಾನ್ಯರಿಗೆ ತೊಂದರೆಯಾಗದಂತೆ ಸಂಪನೂಲ ಕ್ರೂಢೀಕರಣಕ್ಕೆ ನಾವು ಪ್ರಯತ್ನ ಮಾಡಿದ್ದೇವೆ. ಜನರಿಗೆ ಹೊರೆಯಾಗುವಂತಹ ತೆರಿಗೆಗಳನ್ನು ವಿಧಿಸುವುದಿಲ್ಲ ಎಂದು ತಿಳಿಸಿದರು.
ಬಸ್ ಪ್ರಯಾಣ ದರ ಏರಿಕೆಯಾಗಲಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಯವರು ಬಸ್ ದರ ಏರಿಕೆಯಾಗಿ ತುಂಬಾ ವರ್ಷಗಳೇ ಆಗಿವೆ. ಸದ್ಯಕ್ಕೆ ಹೆಚ್ಚಳ ಮಾಡುವ ಸಾಧ್ಯತೆ ಇಲ್ಲ. ಆದರೆ ಈ ಬಗ್ಗೆ ಚರ್ಚೆ ನಡೆಸುತ್ತೇವೆ ಎಂದು ಹೇಳುವ ಮೂಲಕ ಪ್ರಯಾಣದರದ ಏರಿಕೆಯ ಸುಳಿವು ನೀಡಿದರು. ಕೇಂದ್ರ ಸರ್ಕಾರ ರಾಜ್ಯದ ಪಾಲನ್ನು ನ್ಯಾಯೋಚಿತವಾಗಿ ನೀಡಿದರೆ ನಮಗೆ ಪೆಟ್ರೋಲ್, ಡೀಸೆಲ್ ಮೇಲೆ ಮಾರಾಟ ತೆರಿಗೆಯನ್ನು ಹೆಚ್ಚಿಸುವ ಅಗತ್ಯವೇ ಬರುತ್ತಿರಲಿಲ್ಲ ಎಂದು ಸ್ಪಷ್ಟಪಡಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ : ಕೇಂದ್ರ ಸರ್ಕಾರ ನಿರಂತರವಾಗಿ ಪೆಟ್ರೋಲ್, ಡಿಸೇಲ್ ದರ ಏರಿಕೆ ಮಾಡುತ್ತಿದ್ದರೂ ಬಾಯಿ ಬಿಡದ ಬಿಜೆಪಿಯವರು, ಈಗ ರಾಜ್ಯ ಸರ್ಕಾರ ಸಂಪನೂಲ ಕ್ರೋಢಿಕರಣಕ್ಕಾಗಿ ಮಾರಾಟ ತೆರಿಗೆಯನ್ನು ಹೆಚ್ಚಿಸಿದಾಕ್ಷಣ ಪ್ರತಿಭಟನೆ ಮಾಡುತ್ತಿದ್ದಾರೆ. ಬಿಜೆಪಿಯವರು ಬಡವರ ಯೋಜನೆಗಳಿಗೆ ವಿರುದ್ಧವಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಗೃಹ ಕಚೇರಿ ಕೃಷ್ಣದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಜಿಎಸ್‌ಟಿ ನಂತರ ರಾಜ್ಯಕ್ಕೆ ತೆರಿಗೆ ಹೆಚ್ಚು ಮಾಡುವ ಸ್ವಾತಂತ್ರ್ಯ ಕಡಿಮೆಯಾಗಿದೆ.
