ಉದಯವಾಹಿನಿ, ಬೆಂಗಳೂರು: ಕೆ.ಆರ್‌ನಗರ ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣರಿ ಅವರಿಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.ನ್ಯಾಯಮೂರ್ತಿ ಕೃಷ್ಣ.ಎಸ್ ದೀಕ್ಷಿತ್ ಅವರಿದ್ದ ಹೈಕೋರ್ಟ್‌ನ ಏಕಸದಸ್ಯ ಪೀಠ ವಾದ-ಪ್ರತಿವಾದ ಆಲಿಸಿ ಕಾಯ್ದಿರಿಸಿದ ಈ ತೀರ್ಪನ್ನು ನೀಡಿ, ವಿಚಾರಣೆಗೆ ಹಾಜರಾಗಬೇಕು. ವಿಚಾರಣೆಗೆ ಕರೆದಾಗ ಮೈಸೂರು ಮತ್ತು ಹಾಸನಕ್ಕೂ ಬರಬೇಕು.
ಎಂದು ಸೂಚನೆ ನೀಡಿ ಭವಾನಿ ರೇವಣ್ಣ ಅವರಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದರು.ಭವಾನಿ ರೇವಣ್ಣ ಅವರು ಎಸ್‌ಐಟಿಯ 85 ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ಹೀಗಾಗಿ ತನಿಖೆಗೆ ಸಹಕರಿಸಿಲ್ಲ ಎಂಬ ವಾದವನ್ನು ಒಪ್ಪಲು ಸಾಧ್ಯವಿಲ್ಲ. ಪೊಲೀಸರಿಗೆ ಬೇಕಾದಂತಹ ಉತ್ತರ ಕೊಡಬೇಕೆಂದಿಲ್ಲ ಎಂದು ಪ್ರಾಸಿಕ್ಯೂಷನ್ ವಾದವನ್ನು ತಳ್ಳಿ ಹಾಕಿರುವ ನ್ಯಾಯಾಲಯ ರೇವಣ್ಣ ಅವರಿಗೆ ಜಾಮೀನು ಮಂಜೂರು ಮಾಡಿದರು.
ಮಹಿಳೆ ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರು ತನಿಖೆಗೆ ಅಸಹಕಾರ ತೋರುತ್ತಿದ್ದಾರೆ. ನ್ಯಾಯಾಲಯ ನೀಡಿದ ನಿರ್ದೇಶನದಂತೆ ಅವರು ತನಿಖೆಗೆ ಸಹಕಾರ ನೀಡುತ್ತಿಲ್ಲ. ಇದರಿಂದ ತನಿಖೆ ಮುಂದುವರೆಸಲಾಗುತ್ತಿಲ್ಲ. ಅವರು ತನಿಖೆಯ ದಿಕ್ಕು ತಪ್ಪಿಸುತ್ತಿದ್ದಾರೆ. ಪ್ರಶ್ನೆಗಳಿಗೆ ಸಮಂಜಸ ಉತ್ತರ ನೀಡುತ್ತಿಲ್ಲ.
