ಉದಯವಾಹಿನಿ, ಬೇಲೂರು: ಕೌಟುಂಬಿಕ ಕಲಹದ ಹಿನ್ನಲೆಯಲ್ಲಿ ಪತ್ನಿಯನ್ನು ನಾಡ ಬಂದೂಕಿನಿಂದ ಗುಂಡು ಹಾರಿಸಿ ಕೊಂದು ಹಾಕಿದ ತಾನೂ ಕೂಡ ಆತಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಅರೇಹಳ್ಳಿ ಪೊಲೀಸ್‌‍ ಠಾಣೆ ವ್ಯಾಪ್ತಿಯ ದೊಡ್ಡಸಾಲವರ ಗ್ರಾಮದಲ್ಲಿ ಕಳೆದ ರಾತ್ರಿ ನಡೆದಿದೆ.ಜಾಜಿ(50), ಹರೀಶ್‌(60) ಮೃತಪಟ್ಟ ದಂಪತಿ.
ದಿನನಿತ್ಯ ಒಂದಲ್ಲ ಒಂದು ಕಾರಣಕ್ಕೆ ಪತ್ನಿ ಜಾಜಿಯೊಂದಿಗೆ ಪತಿ ಹರೀಶ್‌ ಜಗಳವಾಡುತಿದ್ದರು. ಆದರೆ ಕಳೆದ ರಾತ್ರಿ ನಡೆದ ಜಗಳ ವಿಕೋಪಕ್ಕೆ ಹೋಗಿದ್ದು, ಈ ಸಂದರ್ಭದಲ್ಲಿ ಪತಿ ಮನೆಯಲ್ಲಿದ್ದ ನಾಡ ಬಂದೂಕನ್ನು ತೆಗೆದುಕೊಂಡು ಪತ್ನಿಗೆ ಗುಂಡು ಹಾರಿಸಿ ಕೊಲೆಗೈದಿದ್ದಾನೆೆ.ಪತ್ನಿ ಮೃತಪಟ್ಟಿರುವುದು ದೃಢವಾದ ನಂತರ ತಾನೂ ಸಹ ತಮ ಮನೆಯಲ್ಲೆ ನೇಣು ಬಿಗಿದುಕೊಂಡು ಆತಹತ್ಯೆಗೆ ಶರಣಾಗಿದ್ದಾನೆ.

ದಂಪತಿಗೆ ಮೂರು ಹೆಣ್ಣು ಮಕ್ಕಳಿದ್ದು, ಅವರೆಲ್ಲರೂ ಬೆಂಗಳೂರಿನಲ್ಲಿ ವಿದ್ಯಾಭ್ಯಾಸ ಮಾಡುತಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಹಳೇಬೀಡು ವೃತ್ತ ನಿರೀಕ್ಷಕ ಜಯರಾಂ ಮತ್ತು ಸಿಬ್ಬಂದಿ ಘಟನೆ ನಡೆದ ಸ್ಥಳಕ್ಕಾಗಮಿಸಿ ಪರಿಶೀಲಿಸಿ ತನಿಖೆ ಕೈಗೊಂಡು ಅರೇಹಳ್ಳಿ ಪೊಲೀಸ್‌‍ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!