ಉದಯವಾಹಿನಿ, ಕೋಲ್ಕತ್ತಾ: ಜು.1ರಿಂದ ದೇಶದಲ್ಲಿ ಹೊಸ ಕ್ರಿಮಿನಲ್‌ ಕಾನೂನುಗಳು ಜಾರಿಗೆ ಬರಲಿವೆ. ಐಪಿಸಿ, ಇಂಡಿಯನ್‌ ಎವಿಡೆನ್ಸ್ ಆಕ್ಟ್‌, ಕ್ರಿಮಿನಲ್‌ ಪೊಸೀಜರ್‌ ಕೋಡ್‌ ಜಾಗದಲ್ಲಿ ಭಾರತೀಯ ನ್ಯಾಯ ಸಂಹಿತೆ, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಮತ್ತು ಭಾರತೀಯ ಸಾಕ್ಷ್ಯ ಎಂಬ ಮೂರು ರೀತಿಯ ಮಾದರಿ ಕಾನೂನುಗಳು ಜಾರಿಗೆ ಬರಲಿವೆ ಎಂದು ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವ ಅರ್ಜುನ್‌ ರಾಮ್‌ ಮೇಘವಾಲ್‌ ತಿಳಿಸಿದ್ದಾರೆ.ಭಾರತೀಯ ದಂಡ ಸಂಹಿತೆ 1860, ಭಾರತೀಯ ಸಾಕ್ಷ್ಯ ಕಾಯ್ದೆ 1872 ಮತ್ತು ಅಪರಾಧ ಪ್ರಕ್ರಿಯಾ ಸಂಹಿತೆ 1973 ಅನ್ನು ಬದಲಿಸುವ ಕಾನೂನುಗಳು ಜು. 1 ರಿಂದ ಜಾರಿಗೆ ಬರಲಿವೆ ಎಂದು ಅವರು ಪುನರುಚ್ಚರಿಸಿದರು.
ಪಿಟಿಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿರುವ ಸಚಿವರು, ಭಾರತೀಯ ನ್ಯಾಯ್‌ ಸಂಹಿತಾ, ಭಾರತೀಯ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷ್ಯ ಅಧಿನಿಯಮ್‌ ಎಂಬ ಹೊಸ ಕ್ರಿಮಿನಲ್‌ ಕಾನೂನುಗಳು ಜುಲೈ 1, 2024 ರಿಂದ ಜಾರಿಗೆ ಬರಲಿವೆ ಎಂದು ಹೇಳಿದರು.
ಐಪಿಸಿ, ಸಿಆರ್‌ಪಿಸಿ ಮತ್ತು ಭಾರತೀಯ ಸಾಕ್ಷ್ಯ ಕಾಯ್ದೆಗಳು ಬದಲಾಗುತ್ತಿವೆ. ಸೂಕ್ತ ಸಮಾಲೋಚನೆ ಪ್ರಕ್ರಿಯೆಯನ್ನು ಅನುಸರಿಸಿದ ನಂತರ ಮತ್ತು ಭಾರತದ ಕಾನೂನು ಆಯೋಗದ ವರದಿಗಳನ್ನು ಗಮನದಲ್ಲಿಟ್ಟುಕೊಂಡು ಈ ಮೂರು ರೀತಿಯ ಕಾನೂನುಗಳನ್ನು ಬದಲಾಯಿಸಲಾಗಿದೆ ಎಂದು ಮೇಘವಾಲ್‌ ತಿಳಿಸಿದರು.
ಈ ಮೂರು ರೀತಿಯ ಕಾನೂನುಗಳನ್ನು ಜುಲೈ 1 ರಿಂದ ಭಾರತೀಯ ನ್ಯಾಯ್‌ ಸಂಹಿತಾ, ಭಾರತೀಯ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷ್ಯ ಅಧಿನಿಯಮ್‌ ಎಂಬ ಹೆಸರಿನಲ್ಲಿ ಜಾರಿಗೆ ತರಲಾಗುವುದು. ಮೂರು ಹೊಸ ಕಾನೂನುಗಳ ತರಬೇತಿ ಸೌಲಭ್ಯಗಳನ್ನು ಎಲ್ಲಾ ರಾಜ್ಯಗಳಿಗೂ ಒದಗಿಸಲಾಗುತ್ತಿದೆ ಎಂದು ಮೇಘವಾಲ್‌ ಹೇಳಿದರು.

Leave a Reply

Your email address will not be published. Required fields are marked *

error: Content is protected !!