ಉದಯವಾಹಿನಿ, ಶಿವಮೊಗ್ಗ: ಕರ್ನಾಟಕದಲ್ಲಿ ಅಸಮರ್ಥ ಸರ್ಕಾರ ಆಡಳಿತದಲ್ಲಿದ್ದು ರಾಜ್ಯವನ್ನು ದಿವಾಳಿ ಅಂಚಿಗೆ ತಗೆದುಕೊಂಡು ಹೋಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದರು.ಮತ್ತೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಇದ್ದಾಗ ಯಾವುದೇ ಸಮಸ್ಯೆ ಇರಲಿಲ್ಲ. ಒಂದೇ ವರ್ಷದಲ್ಲಿ ಇವರ ಆಡಳಿತದಿಂಸ ಆರ್ಥಿಕ ಸಂಕಷ್ಟಕ್ಕೆ ರಾಜ್ಯ ಸಿಲುಕಿಕೊಂಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕರ್ನಾಟಕದಲ್ಲಿ ಅಸಮರ್ಥ ಸರ್ಕಾರ ಆಡಳಿತದಲ್ಲಿದ್ದು ರಾಜ್ಯವನ್ನು ದಿವಾಳಿ ಅಂಚಿಗೆ ತಗೆದುಕೊಂಡು ಹೋಗುತ್ತಿದೆ. ಬಿಜೆಪಿ ಸರ್ಕಾರ ಇದ್ದಾಗ ಯಾವುದೇ ಸಮಸ್ಯೆ ಇರಲಿಲ್ಲ. ಒಂದೇ ವರ್ಷದಲ್ಲಿ ಇವರ ಆಡಳಿತದಿಂದ ಆರ್ಥಿಕ ಸಂಕಷ್ಟಕ್ಕೆ ರಾಜ್ಯ ಸಿಲುಕಿಕೊಂಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೇಂದ್ರದ ವಿರುದ್ಧ ದೂರುವ ಚಾಳಿ ರೂಢಿಸಿಕೊಂಡಿದ್ದಾರೆ: ಸಿಎಂ ಸಿದ್ದರಾಮಯ್ಯ ಕೇಂದ್ರದ ವಿರುದ್ಧ ದೂರುವ ಚಾಳಿ ರೂಢಿಸಿಕೊಂಡಿದ್ದಾರೆ. ಪ್ರತಿಯೊಂದರ ದರ ಏರಿಕೆ ಮಾಡುತ್ತಿದ್ದು ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯವಾಗಿದೆ. ಇದನ್ನು ಆಡಳಿತ ಪಕ್ಷದ ನಾಯಕರೇ ಹೇಳುತ್ತಿದ್ದಾರೆ. ಜನಪರ ಆಡಳಿತ ನೀಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಅನುಭವಿ ಮುಖ್ಯಮಂತ್ರಿಗಳು ಇಂದು ಆಡಳಿತ ನಡೆಸಲು ಪರದಾಡುತ್ತಿದ್ದಾರೆ. ಇದರ ಮಧ್ಯೆ ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆಂದು ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು.

 

Leave a Reply

Your email address will not be published. Required fields are marked *

error: Content is protected !!