ಉದಯವಾಹಿನಿ, ಬೆಂಗಳೂರು: ಬೆಂಗಳೂರಿನಲ್ಲಿ ಕುಡಿಯುವ ನೀರಿನ ದರ ಏರಿಕೆ ಅನಿವಾರ್ಯ ಎಂಬ ದಾಟಿಯಲ್ಲಿ ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್ ಮಾತನಾಡಿದ್ದು, ನೀರಿನ ದರ ಏರಿಕೆಯಾಗುವುದು ನಿಶ್ಚಿತ. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಹತ್ತು ವರ್ಷಗಳಿಂದ ಬೆಂಗಳೂರು ಜಲಮಂಡಳಿ ಕುಡಿಯುವ ನೀರಿನ ದರಗಳನ್ನು ಪರಿಷ್ಕರಿಸಿಲ್ಲ. ಮಂಡಳಿ ನಷ್ಟದಲ್ಲಿದೆ. ಮಂಡಳಿಯನ್ನು ಸರಿದಾರಿಗೆ ತರಲು ಕುಡಿಯುವ ನೀರಿನ ದರ ಏರಿಕೆ ಅನಿವಾರ್ಯ ಎಂದರು.
ಕುಡಿಯುವ ನೀರಿನ ದರವನ್ನು ಎಷ್ಟು ಏರಿಕೆ ಮಾಡಬೇಕು, ಯಾವಾಗಿನಿಂದ ದರ ಏರಿಕೆ ಜಾರಿ ಮಾಡಬೇಕು ಎಂಬ ಬಗ್ಗೆ ಇನ್ನೂ ತೀರ್ಮಾನ ಮಾಡಿಲ್ಲ. ಅಧಿಕಾರಿಗಳಿಗೆ ಈ ಬಗ್ಗೆ ಚರ್ಚಿಸಿ ಒಂದು ತೀರ್ಮಾನ ಮಾಡುವಂತೆ ಸೂಚಿಸಿದ್ದೇನೆ.
