ಉದಯವಾಹಿನಿ, ಬೆಳಗಾವಿ: ಆರೋಗ್ಯಕರ ಬದುಕಿಗೆ ಯೋಗ ಅತ್ಯಗತ್ಯ. ಪ್ರತಿದಿನವು ಯೋಗ ಮಾಡುವುದರಿಂದ ದೈಹಿಕ, ಮಾನಸಿಕ ಆರೋಗ್ಯ ಉತ್ತಮವಾಗಿರುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಜಗದೀಶ್‌ ಶೆಟ್ಟರ್‌ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌‍, ಮಹಾನಗರ ಪಾಲಿಕೆ, ಜಿಲ್ಲಾ ಆಯುಷ್‌ ಇಲಾಖೆ ಹಾಗೂ ಇತರೆ ಇಲಾಖೆಗಳ ಸಹಯೋಗದಲ್ಲಿ ಕೆಪಿಟಿಸಿಎಲ್‌ ಭವನದಲ್ಲಿ ನಡೆದ 10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಯೋಗದಿಂದ ಬೌದ್ಧಿಕ ಬೆಳವಣಿಗೆ ಜತೆಗೆ ಸಾಮಾಜಿಕ ಬದುಕಿನಲ್ಲಿ ಉತ್ತಮ ಜೀವನ ನಡೆಸಲು ಸಹಕಾರಿಯಾಗಲಿದೆ. ಇಂದಿನ ಯುವ ಪೀಳಿಗೆ ತಮ ದಿನಚರಿಯಲ್ಲಿ ಯೋಗ ಪದ್ಧತಿ ಅಳವಡಿಸಿಕೊಳ್ಳಬೇಕು ಎಂದರು. ಮನುಷ್ಯ ಆಧುನಿಕ ಒತ್ತಡದಿಂದ ಕಲಬೆರಿಕೆ ಆಹಾರದಿಂದ ಶ್ರಮರಹಿತ ಜೀವನದಿಂದ ವೈಜ್ಞಾನಿಕ ಸಾಧನಗಳ ದುರ್ಬಳಕೆ ಹಾಗೂ ದುಶ್ಚಟಗಳಿಂದ ಅನೇಕ ರೋಗಗಳಿಗೆ ಬಲಿಯಾಗಿದ್ದಾನೆ. ಈ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಎಂದರೆ ಪ್ರಕೃತಿಯನ್ನು ಅರ್ಥ ಮಾಡಿಕೊಂಡು ಸಹಜ, ಸರಳ, ಬದುಕಿನ ಜೊತೆಗೆ ತನ್ನಂತೆ ಇತರೆ ಜೀವಿಗಳಿಗೆ ಬದುಕುವ ಅವಕಾಶ ಕಲ್ಪಿಸಿಕೊಡಬೇಕು ಎಂದರು.

ವಿಧಾನಪರಿಷತ್‌ ಸದಸ್ಯ ಹನುಮಂತ ನಿರಾಣಿ, ಜಿಲ್ಲಾ ಆಯುಷ್‌ ಅಧಿಕಾರಿ ಶ್ರೀಕಾಂತ ಸುಣಧೋಳಿ, ಜರ್ಮನಿ ಹಾಗೂ ಇಂಗ್ಲೆಂಡ್‌ ದೇಶದ ಯೋಗ ಪಟುಗಳು, ವಿವಿಧ ಇಲಾಖೆಯ ಅಧಿಕಾರಿಗಳು, ಆರೋಗ್ಯ ಇಲಾಖೆ, ಪೊಲೀಸ್‌‍ ಇಲಾಖೆ ಸಿಬ್ಬಂದಿಗಳು, ಎನ್‌‍ಜಿಓ ಸಂಸ್ಥೆಗಳ ಪ್ರತಿನಿಧಿಗಳು, ವಿವಿಧ ಶಾಲಾ, ಕಾಲೇಜು ವಿದ್ಯಾರ್ಥಿಗಳು, ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *

error: Content is protected !!