ಉದಯವಾಹಿನಿ, ಬೆಂಗಳೂರು: ಮಾದಕ ದ್ರವ್ಯ ಮಾರಾಟ ಹಾಗೂ ಸರಬರಾಜು ವಿರುದ್ಧ ಸಮರ ಸಾರಿರುವ ಬೆಂಗಳೂರು ನಗರ ಪೊಲೀಸರು ವಿವಿಧ ಪ್ರಕರಣಗಳಲ್ಲಿ ಕಳೆದ ಫೆಬ್ರವರಿ 10ರಿಂದ ಜೂ. 24ರವರೆಗೆ ವಶಪಡಿಸಿಕೊಳ್ಳಲಾದ 41,73,22,900 ಮೌಲ್ಯದ ವಿವಿಧ ಮಾದಕ ದ್ರವ್ಯಗಳನ್ನು ಇಂದು ನಾಶ ಮಾಡಲಾಯಿತು.
ನಗರದಲ್ಲಿ ಇತ್ತೀಚೆಗೆ ಮಾದಕ ದ್ರವ್ಯಗಳ ಮಾರಾಟ ದಂಧೆ ವ್ಯಾಪಕವಾಗಿ ನಡೆಯುತ್ತಿದ್ದು, ಇದರ ಮೇಲೆ ಹದ್ದಿನ ಕಣ್ಣಿಟ್ಟಿರುವ ನಗರ ಪೊಲೀಸರು ವಿವಿಧ ಠಾಣಾ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಿ ಮಾರಾಟ, ಸರಬರಾಜಿನಲ್ಲಿ ತೊಡಗಿದ್ದವರನ್ನು ಬಂಧಿಸಿ ಅಪಾರ ಪ್ರಮಾಣದ ಗಾಂಜಾ, ಚರಸ್ಸು, ಕೊಕೈನ್‌, ಎಂಡಿಎಂಎ ಪೌಡರ್‌ ಸೇರಿದಂತೆ ಮತ್ತಿತರ ಗಾಂಜಾ ವಸ್ತುಗಳನ್ನು ವಶಕ್ಕೆ ಪಡೆದು ನೆಲಮಂಗಲ ತಾಲೂಕಿನ ದಾಬಸ್‌‍ಪೇಟೆ ಕೈಗಾರಿಕಾ ಪ್ರದೇಶದಲ್ಲಿ ಹಿರಿಯ ಪೊಲೀಸ್‌‍ ಅಧಿಕಾರಿಗಳ ಸಮುಖದಲ್ಲಿ ನಾಶ ಮಾಡಲಾಯಿತು. ಯುವ ಜನತೆಯನ್ನು ಟಾರ್ಗೆಟ್‌ ಮಾಡಿಕೊಂಡು ಮಾದಕ ದ್ರವ್ಯ ಮಾರಾಟ ಮಾಡುವವರ ವಿರುದ್ಧ ನಗರ ಪೊಲೀಸರು ಕ್ರಮ ಕೈಗೊಂಡಿದ್ದು, ಮಾದಕ ದ್ರವ್ಯ ಮುಕ್ತ ಬೆಂಗಳೂರನ್ನು ನಿರ್ಮಾಣ ಮಾಡಲು ಪಣ ತೊಟ್ಟಿದ್ದಾರೆ. ಇದಕ್ಕೆ ಸಾರ್ವಜನಿಕರ ಸಹಕಾರವೂ ಅತ್ಯಗತ್ಯವಾಗಿದೆ.
ನಗರ ವ್ಯಾಪ್ತಿಯಲ್ಲಿ ಮಾದಕ ವಸ್ತುಗಳು ಹಾಗೂ ಗಾಂಜಾ ಮಾರಾಟ, ಸಾಗಾಟ ಕಂಡು ಬಂದರೆ ಪೊಲೀಸರಿಗೆ ಮಾಹಿತಿ ನೀಡಿದರೆ ಅಂತಹವರ ವಿರುದ್ಧ ನಿರ್ಧಾಕ್ಷಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಹಿರಿಯ ಪೊಲೀಸ್‌‍ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

 

Leave a Reply

Your email address will not be published. Required fields are marked *

error: Content is protected !!