ಉದಯವಾಹಿನಿ, ಮಡಿಕೇರಿ: ಕೊಡಗು ಜಿಲ್ಲೆಯ ಮಲ್ದರೆಯಲ್ಲಿ ದೊಡ್ಡ ಮಟ್ಟದ ಅರಣ್ಯ ಸ್ವಚ್ಛತೆ ಕಾರ್ಯಕ್ರಮವನ್ನು ಬಿಸ್ಲೆರಿ ಇಂಟರ್‌ನ್ಯಾಷನಲ್ ಸಹಭಾಗಿತ್ವದಲ್ಲಿ ಕರ್ನಾಟಕ ಅರಣ್ಯ ಇಲಾಖೆ ಆಯೋಜಿಸಿದೆ. ಮಾಲ್ದರೆಯಿಂದ ಮುತ್ತೂರು ಅಭಯಾರಣ್ಯದವರೆಗೆ ಸುಮಾರು 10 ಕಿ.ಮೀವರೆಗೆ ಸ್ವಚ್ಛತಾ ಅಭಿಯಾನವನ್ನು ನಡೆಸಲಾಗಿದೆ.
ತಂಡವು ಒಟ್ಟು 810ಕಿಲೋ ಪ್ಲಾಸ್ಟಿಕ್ ತ್ಯಾಜ್ಯ ಮತ್ತು ಜೈವಿಕವಾಗಿ ವಿಘಟನೆಯಾಗದ ತ್ಯಾಜ್ಯವನ್ನು ಸಂಗ್ರಹಿಸಿದೆ. ಅಷ್ಟೇ ಅಲ್ಲ, ಸೈನೇಜ್ ಬೋರ್ಡ್‌ಗಳನ್ನು ನೆಟ್ಟು, ಸರಿಯಾದ ತ್ಯಾಜ್ಯ ವಿಲೇವಾರಿ ವಿಧಾನಗಳ ಬಗ್ಗೆ ಜಾಗೃತಿ ಮೂಡಿಸುವ ಕೆಲಸವನ್ನೂ ಮಾಡಿದೆ. ಅಷ್ಟೇ ಅಲ್ಲ, ಮರುಬಳಕೆಯನ್ನು ಉತ್ತೇಜಿಸಿ, ಕಸ ಎಸೆಯುವುದನ್ನು ತಪ್ಪಿಸಲು ಒಮ್ಮೆ ಬಳಸಿ ಎಸೆಯುವ ಪ್ಲಾಸ್ಟಿಕ್‌ನ ಪರಿಣಾಮ ಮತ್ತು ಬಳಸಿದ ಪ್ಲಾಸ್ಟಿಕ್ ಅನ್ನು ಸಂಗ್ರಹಿಸುವ ವಿಧಾನದ ಬಗ್ಗೆ ತಿಳಿವಳಿಕೆಯನ್ನೂ ಮೂಡಿಸಲು ಯತ್ನಿಸಿದೆ.
ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಮಡಿಕೇರಿ ವಿಭಾಗದ ಡಿಆರ್‌ಎಫ್‌ಒ ಚಿನ್ನವಿಶೇರಾ ಹೇಳುವಂತೆ, ಪರಿಸರ ಸುಸ್ಥಿರತೆಯನ್ನು ಖಾತ್ರಿಪಡಿಸುವ ನಿಟ್ಟಿನಲ್ಲಿ ಈ ಪಾಲುದಾರಿಕೆ ಅತ್ಯಂತ ಮಹತ್ವದ್ದಾಗಿದೆ. ಬಾಟಲ್ಸ್ ಫಾರ್ ಚೇಂಜ್‌ ಎಂಬ ಕಾರ್ಯಕ್ರಮದ ಅಡಿಯಲ್ಲಿ ಮರುಬಳಕೆ ಪ್ರಯತ್ನದಲ್ಲಿ ಬಿಸ್ಲೆರಿ ಇಂಟರ್‌ನ್ಯಾಷನಲ್‌ ಸಹಕಾರ ಮತ್ತು ಸಕ್ರಿಯ ತೊಡಗಿಸಿಕೊಳ್ಳುವಿಕೆಯನ್ನು ನಾವು ಸ್ವಾಗತಿಸುತ್ತೇವೆ ಕರ್ನಾಟಕಕ್ಕೆ ಪರಿಸರ ಸ್ನೇಹಿ ಭವಿಷ್ಯವನ್ನು ರೂಪಿಸುವುದಕ್ಕೆ ನಾವು ನಿರಂತರವಾಗಿ ಶ್ರಮಿಸುತ್ತೇವೆ ಎನ್ನುತ್ತಾರೆ.

ಸಹಭಾಗಿತ್ವದ ಬಗ್ಗೆ ಮಾತನಾಡಿದ ಬಿಸ್ಲೆರಿ ಇಂಟರ್‌ನ್ಯಾಷನಲ್ ಪ್ರೈ. ಲಿ ಸುಸ್ಥಿರತೆ ಮತ್ತು ಕಾರ್ಪೊರೇಟ್ ವ್ಯವಹಾರಗಳ ನಿರ್ದೇಶಕ ಕೆ. ಗಣೇಶ್, ನಮ್ಮ ಬಾಟಲ್ಸ್ ಫಾರ್ ಚೇಂಜ್ ಕಾರ್ಯಕ್ರಮದ ಮೂಲಕ ಪರಿಸರ ಸಂರಕ್ಷಣೆಯನ್ನು ಉತ್ತೇಜಿಸಲು ಕರ್ನಾಟಕ ಅರಣ್ಯ ಇಲಾಖೆಯ ಜೊತೆಗೆ ಸಹಭಾಗಿತ್ವ ವಹಿಸಿರುವುದಾಗಿ ಘೋಷಿಸುವುದು ನಮಗೆ ಖುಷಿಯ ಸಂಗತಿಯಾಗಿದೆ. ಧನಾತ್ಮಕ ಬದಲಾವಣೆಯನ್ನು ಪ್ರೋತ್ಸಾಹಿಸಲು ಮತ್ತು ಸುಸ್ಥಿರ ಭವಿಷ್ಯವನ್ನು ಪೋಷಿಸಲು ನಮಗೆ ಈ ಪಾಲುದಾರಿಕೆಯು ಪೂರಕವಾಗಿರಲಿದೆ ಎಂದು ಹೇಳಿದರು.

 

Leave a Reply

Your email address will not be published. Required fields are marked *

error: Content is protected !!