ಉದಯವಾಹಿನಿ, ನವದೆಹಲಿ: ಭಾರತರತ್ನ ಲಾಲ್ ಕೃಷ್ಣ ಅಡ್ವಾಣಿ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ರಾತ್ರಿ ಅವರನ್ನು ದೆಹಲಿ ಏಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. 96 ವರ್ಷದ ಹಿರಿಯ ಬಿಜೆಪಿ ನಾಯಕನಿಗೆ ವಿಶೇಷ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದೆ. ಮುಂಜಾನೆ 4 ಗಂಟೆ ಸುಮಾರಿಗೆ ಅಡ್ವಾಣಿ ಆರೋಗ್ಯದ ಬಗ್ಗೆ ಏಮ್ಸ್ ಮಾಹಿತಿ ನೀಡಿದೆ.
ಬಿಜೆಪಿಯ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ಅವರನ್ನು ಏಮ್ಸ್‌ಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಅವರನ್ನು ನಿಗಾದಲ್ಲಿರಿಸಲಾಗಿದೆ ಎಂದು ಏಮ್ಸ್ ಹೇಳಿಕೆಯಲ್ಲಿ ತಿಳಿಸಿದೆ.
ಇದಕ್ಕಿಂತ ಹೆಚ್ಚಿನ ಮಾಹಿತಿಯನ್ನು ಆಸ್ಪತ್ರೆ ನೀಡಿಲ್ಲ.

ತಡರಾತ್ರಿ ಅಡ್ವಾಣಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಕೆಲವು ವರದಿಗಳು ತಿಳಿಸಿವೆ. ಎಲ್‌ಕೆ ಅಡ್ವಾಣಿ ಅವರನ್ನು ಆಸ್ಪತ್ರೆಯ ವೃದ್ಧಾಪ್ಯ ವಿಭಾಗದ ತಜ್ಞರ ನಿಗಾದಲ್ಲಿ ಇರಿಸಲಾಗಿದೆ. ಎಲ್‌ಕೆ ಅಡ್ವಾಣಿ ವಯಸ್ಸಿಗೆ ಸಂಬಂಧಿಸಿದ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.ಎಲ್‌ಕೆ ಅಡ್ವಾಣಿ ಅವರ ಆರೋಗ್ಯವನ್ನು ಕಾಲಕಾಲಕ್ಕೆ ಮನೆಯಲ್ಲಿ ತಪಾಸಣೆ ಮಾಡಲಾಗುತ್ತಿತ್ತು, ಆದರೆ ಕೆಲವು ಗಂಟೆಗಳ ಹಿಂದೆ ಅವರ ಆರೋಗ್ಯ ಹದಗೆಟ್ಟ ಕಾರಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು.

Leave a Reply

Your email address will not be published. Required fields are marked *

error: Content is protected !!