ಉದಯವಾಹಿನಿ, ಬೆಂಗಳೂರು: ವಾಲೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂಪಾಯಿ ದಲಿತರ ಹಣವನ್ನು ಗುಳುಂ ಮಾಡಿರುವ ಸಿದ್ಧ ಹಸ್ತರು ಈಗ ಮೈಸೂರಿನ ಮುಡಾದಲ್ಲಿ 4,000 ಕೋಟಿ ಗುಳುಂ ಮಾಡುವ ಮೂಲಕ ಮತ್ತೊಮೆ ತಮ ಕೈ ಚಳಕ ಪ್ರದರ್ಶನ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ವಿಧಾನಸಭೆಯ ನಾಯಕ ಆರ್.ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ.
ಈ ಕುರಿತು ತಮ್ಮ ಸಾಮಾಜಿಕ ಜಾಲತಾಣ ಎಕ್‌್ಸನಲ್ಲಿ ಸಾಲು ಸಾಲು ಪೋಸ್ಟ್ ಮಾಡಿರುವ ಆಶೋಕ್ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರೇ 4,000 ಕೋಟಿ ಗುಳುಂ ಮಾಡಿರುವ ಹಗರಣಕ್ಕೆ ಈ ಪ್ರಶ್ನೆಗಳಿಗೆ ನಿಮ ಬಳಿ ಉತ್ತರವಿದೆಯೇ? ಎಂದು ಪ್ರಶ್ನೆ ಮಾಡಿದ್ದಾರೆ.
ಗೋಲಾಲ್ ಸಿಎಂ ಸಿದ್ದರಾಮಯ್ಯನವರೇನವರೇ, ತಮ ಧರ್ಮ ಪತ್ನಿ ಅವರ ಹೆಸರಿನಲ್ಲೂ ನಿಯಮ ಬಾಹಿರವಾಗಿ ನಿವೇಶನ ವರ್ಗಾವಣೆ ಆಗಿರುವ ಸುದ್ದಿ ಹೊರಬಂದಿದೆಯಲ್ಲ ಇದನ್ನು ಹೇಗೆ ಸಮರ್ಥನೆ ಮಾಡಿಕೊಳ್ಳುತ್ತೀರಿ? ಆರೋಪ ಕೇಳಿಬಂದಿರುವ ಮುಡಾ ಅಧಿಕಾರಿಗಳನ್ನು ಅಮಾನತು ಮಾಡದೆ, ಕೇವಲ ವರ್ಗಾವಣೆ ಮಾಡಿ ಕೈ ತೊಳೆದುಕೊಂಡಿದ್ದೀರಲ್ಲ, ಯಾರನ್ನು ರಕ್ಷಣೆ ಮಾಡಲು ಹೊರಟಿದ್ದೀರಿ? ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.
4,000 ಕೋಟಿ ರೂಪಾಯಿ ಮೌಲ್ಯದ ಈ ಬ್ರಹಾಂಡ ಭ್ರಷ್ಟಾಚಾರ ಪ್ರಕರಣವನ್ನು ಅಸಲಿಗೆ ಸಿಬಿಐಗೆ ವಹಿಸಬೇಕು ಅಥವಾ ನಿವೃತ್ತ ನ್ಯಾಯಮೂರ್ತಿ ನೇತೃತ್ವದ ತನಿಖಾ ಆಯೋಗಕ್ಕೆ ನೀಡಬೇಕು. ಅದು ಬಿಟ್ಟು ತನಿಖೆಗೆ ಇಬ್ಬರು ಐಎಎಸ್ ಅಧಿಕಾರಿಗಳನ್ನು ನೇಮಿಸಿ ಪ್ರಕರಣವನ್ನು ಮುಚ್ಚಿಹಾಕಲು ಹೊರಟಿದ್ದೀರಲ್ಲ ಈ ಹಗರಣದಲ್ಲಿ ತಮ ಪಾಲೆಷ್ಟು? ಎಂದು ಪ್ರಶ್ನೆಸಿದ್ದಾರೆ.
