ಉದಯವಾಹಿನಿ, ಬೆಂಗಳೂರು : ಶಿಕ್ಷಕನೇ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಪೋಷಕರು ಮಕ್ಕಳನ್ನು ಶಾಲೆಗೆ ಕಳುಹಿಸಲು ಹಿಂದೇಟು ಹಾಕುವ ಪರಿಸ್ಥಿತಿ ನಿರ್ಮಾಣವಾಗಿದೆ.
ಕಮಲಾನಗರದ ಶಾಲೆಯೊಂದರಲ್ಲಿ ಈ ಘಟನೆ ನಡೆದಿದ್ದು, ಬಾಲಕಿ ಪೋಷಕರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಅಲ್ಲದೇ ಮಕ್ಕಳ ಹಕ್ಕುಗಳ ಆಯೋಗವು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ.
ಅನಾಚಾರ ಎಸಗಿದ ಶಿಕ್ಷಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಾಲಕಿಯ ಪೋಷಕರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.
ಶಾಲೆಯಲ್ಲೇ ಬಾಲಕಿಗೆ ಶಿಕ್ಷಕ ಲೈಂಗಿಕ ಕಿರುಕುಳ ನೀಡಿದ್ದು, ಈ ವಿಚಾರವನ್ನು ಹೊರಗೆ ಹೇಳದಂತೆ ಬೆದರಿಕೆ ಹಾಕಿದ್ದಾನೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!