ಉದಯವಾಹಿನಿ, ಬೆಂಗಳೂರು: ಮೈಸೂರಿನ ಮೂಡಾದಲ್ಲಿ ಬಿಜೆಪಿ ಸರ್ಕಾರ ಇದ್ದಾಗಲೇ ೫೦:೫೦ ನಿಯಮ ರೂಪಿಸಿ ಕಾನೂನು ಬದ್ಧವಾಗಿ ಪರ್ಯಾಯ ನಿವೇಶನ ನೀಡಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಸ್ಪಷ್ಟನೆ ನೀಡಿದ್ದಾರೆಈ ಕುರಿತು ಟ್ವೀಟ್ ಮಾಡಿರುವ ಅವರು , ನನ್ನ ಪತ್ನಿಗೆ ತವರು ಮನೆಯಿಂದ ಬಳುವಳಿಯಾಗಿ ಬಂದ ಕೆಸರೆ ಸಮೀಪದ ೩ ಎಕರೆ ೧೬ ಗುಂಟೆ ಜಮೀನನ್ನು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವು ಸೈಟ್ ಮಾಡಿ ಬೇರೆಯವರಿಗೆ ಹಂಚಿಕೆ ಮಾಡಿತ್ತು ಎಂದು ಅವರು ಹೇಳಿದ್ದಾರೆ. ಅದಕ್ಕೆ ಮೂಡಾ ಪರ್ಯಾಯ ಜಮೀನು ನೀಡಿದ್ದು ಕೂಡ ಬಿಜೆಪಿ ಸರ್ಕಾರದ ಕಾಲದಲ್ಲಿ ಎಂದು ಅವರು ತಿಳಿಸಿದ್ದಾರೆ. ತಾವು ಅಧಿಕಾರದಲ್ಲಿ ಇದ್ದಾಗ ಜಮೀನು ತೆಗೆದುಕೊಳ್ಳಲು ಹೋಗಲಿಲ್ಲ. ಬಿಜೆಪಿ ಸರ್ಕಾರವೇ ೫೦:೫೦ ನಿಯಮ ರೂಪಿಸಿ ಕಾನೂನು ಬದ್ಧವಾಗಿ ಪರ್ಯಾಯ ನಿವೇಶನ ನೀಡಿದೆ. ಇದರಲ್ಲಿ ತಪ್ಪೇನಿದೆ ಎಂದು ಅವರು ಪ್ರಶ್ನಿಸಿದ್ದಾರೆ.
