ಉದಯವಾಹಿನಿ, ಬೆಂಗಳೂರು: ಬಿಬಿಎಂಪಿ ಕಲ್ಯಾಣ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣ ಆರೋಪ ಸಂಬಂಧಿಸಿದಂತೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಹಗರಣದ ಸಮಗ್ರ ತನಿಖೆ ನಡೆಸಿ ವರದಿ ನೀಡುವಂತೆ ಪಶ್ಚಿಮ ವಲಯದ ಜಂಟಿ ಆಯುಕ್ತರಿಗೆ ಆದೇಶಿಸಿದ್ದಾರೆ.ಅಸ್ತಿತ್ವದಲ್ಲೆ ಇಲ್ಲದ ಸೊಸೈಟಿ ಗಳಿಗೆ ಕೋಟ್ಯಂತರ ಹಣ ವರ್ಗಾವಣೆ ಮಾಡಲಾಗಿದೆ ಎನ್ನುವ ಆರೋಪ ಕೇಳಿಬಂದಿತ್ತು. ಈ ಸಂಬಂಧಿಸಿದಂತೆ ತುಷಾರ್ ಗಿರಿನಾಥ್ ಅವರು ಪಾಲಿಕೆಯ ೮ ವಲಯಗಳ ಕಲ್ಯಾಣ ಇಲಾಖೆಯಲ್ಲಿ ಕೊಟ್ಟಿರೋ ಅನುದಾನದ ಹಂಚಿಕೆ ಸಂಪೂರ್ಣ ವಿವರ ಪಡೆದುಕೊಂಡಿದ್ದಾರೆ.
ಸೊಸೈಟಿ ಗಳ ಅಸ್ತಿತ್ವದ ಬಗ್ಗೆ ಹಾಗೂ ಫಲಾನುಭವಿಗಳಿಗೆ ವರ್ಗಾವಣೆ ಅದ ಹಣದ ಬಗ್ಗೆ ತನಿಖೆ ನಡೆಸಿ ಮಾಹಿತಿ ನೀಡುವಂತೆ ಸೂಚನೆ ನೀಡಿದ್ದಾರೆ.
ಅದೇ ರೀತಿ, ಮೂರು ದಿನಗಳಲ್ಲಿ ಸಮಗ್ರ ಮಾಹಿತಿ ಸಂಗ್ರಹಿಸಿ ನೀಡುವಂತೆ ಸೂಚನೆ ನೀಡಿದ್ದು, ಇದರ ಬೆನ್ನಲ್ಲೇ ಬಿಬಿಎಂಪಿ ಕಂದಾಯ ಅಧಿಕಾರಿಗಳು ಸೊಸೈಟಿ ಗಳ ಬೆನ್ನು ಬಿದ್ದಿದ್ದಾರೆ.
