ಉದಯವಾಹಿನಿ,ಬೆಂಗಳೂರು: ಅಂತೂ ಇಂದು ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಹುಮತದೊಂದಿಗೆ ಸರ್ಕಾರ ರಚನೆಯ ದಾಪುಗಾಲು ಇಟ್ಟಿದ್ದಂತ ಕಾಂಗ್ರೆಸ್ ಪಕ್ಷದ ಸರ್ಕಾರ ನಾಳೆ ರಚನೆಯಾಗಲಿದೆ. ಮುಖ್ಯಮಂತ್ರಿಯಾಗಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ.ಈ ಬಳಿಕ 50 – 50 ಸೂತ್ರದ ಅಡಿಯಲ್ಲಿ ಸಚಿವ ಸಂಪುಟ ರಚನೆಯಾಗಲಿದೆ ಎಂದು ಹೇಳಲಾಗುತ್ತಿದೆ.ತೀವ್ರ ಕುತೂಹಲ ಕೆರಳಿಸಿದ್ದಂತ ಕಾಂಗ್ರೆಸ್ ಮುಂದಿನ ಸಿಎಂ ಆಯ್ಕೆ ಕಗ್ಗಂಟು ಅಂತ್ಯಗೊಂಡಿದೆ. ಹೈಕಮಾಂಡ್ 30-30 ತಿಂಗಳು ಅಧಿಕಾರ ಹಂಚಿಕೆ ಸೂತ್ರದ ಮೂಲಕ ಸಿದ್ಧರಾಮಯ್ಯ ಅವರನ್ನು ಸಿಎಂ, ಡಿಕೆ ಶಿವಕುಮಾರ್ ಅವರನ್ನು ಡಿಸಿಎಂ ಆಗಿ ಆಯ್ಕೆ ಮಾಡಲಾಗಿದೆ. ನಾಳೆ ಮಧ್ಯಾಹ್ನ 12ಕ್ಕೆ ಬೆಂಗಳೂರಿನ ಕಂಠೀರವ ಕ್ರೀಢಾಂಗಣದಲ್ಲಿ ನೂತನ ಸಿಎಂ, ಡಿಸಿಎಂ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದೆ.ಇನ್ನೂ ಸಿಎಂ, ಡಿಸಿಎಂ ಪ್ರಮಾಣವಚನ ಕಾರ್ಯಕ್ರಮದ ನಂತ್ರ ಸಚಿವ ಸಂಪುಟ ರಚನೆಯ ಸರ್ಕಸ್ ನಡೆಯಲಿದೆ. ಈಗಾಗಲೇ ಅನೇಕ ಶಾಸಕರು ಸಚಿವ ಸ್ಥಾನಕ್ಕಾಗಿ ಲಾಭಿ ನಡೆಸುತ್ತಿದ್ದು. ದೆಹಲಿಯಲ್ಲಿ ಹೈಕಮಾಂಡ್ ಭೇಟಿಯಾಗಿ ಒತ್ತಡವನ್ನು ಕೂಡ ಹಾಕುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.ಆದ್ರೇ ಕಾಂಗ್ರೆಸ್ ಹೈಕಮಾಂಡ್ ಮಾತ್ರ ಸಚಿವ ಸಂಪುಟ ರಚನೆಯಲ್ಲಿ 50-50 ಸೂತ್ರವನ್ನು ಪಾಲಿಸಲಿದ್ದಾರೆ ಎನ್ನಲಾಗುತ್ತಿದೆ. ಸಿದ್ಧರಾಮಯ್ಯ ಬಣದ ಶೇ.50ರಷ್ಟು ಶಾಸಕರಿಗೆ, ಡಿಕೆ ಶಿವಕುಮಾರ್ ಬಣದ ಶೇ.50ರಷ್ಟು ಶಾಸಕರಿಗೆ ಸಚಿವ ಸ್ಥಾನಗಳ ಹಂಚಿಕಯ ಸೂತ್ರವನ್ನು ಪಾಲಿಸುವಂತೆ ಸೂಚಿಸಿದೆ ಎನ್ನಲಾಗುತ್ತಿದೆ. ಈ 50-50 ಸೂತ್ರದಂತೆ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ರಚನೆಯಾಗಲಿದೆ ಎನ್ನಲಾಗುತ್ತಿದೆ. ಆ ಬಗ್ಗೆ ನಾಳೆ ಸಿಎಂ, ಡಿಸಿಎಂ ಪ್ರಮಾಣವಚನದ ಬಳಿಕ ಸ್ಪಷ್ಟವಾಗಿ ತಿಳಿಯಲಿದೆ.
