ಉದಯವಾಹಿನಿ, ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದ್ದು, ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನಾಳೆ ಮಧ್ಯಾಹ್ನ 12.30 ಕ್ಕೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ.ಸಿಎಂ ಆಯ್ಕೆ ಕಸರತ್ತು ಮುಗಿದ ಬೆನ್ನಲ್ಲೇ ಸಚಿವ ಸ್ಥಾನದ ಆಕಾಂಕ್ಷಿಗಳ ಲಾಭಿ ಶುರುವಾಗಿದ್ದು, ದೆಹಲಿಗೆ ಸಚಿವ ಸ್ಥಾನಾಕಾಂಕ್ಷಿಗಳು ದೌಡಾಯಿಸುತ್ತಿದ್ದಾರೆ.ಹೌದು, ದೆಹಲಿಯ ರಾಜಾಜಿ ರಾಜಾಜಿ ಮಾರ್ಗ್ 10 ರಲ್ಲಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸಕ್ಕೆ ಕಾಂಗ್ರೆಸ್ ಶಾಸಕರ ದಂಡೇ ದೌಡಾಯಿಸುತ್ತಿದೆ. ನನಗೂ ಸಚಿವ ಸ್ಥಾನ ಕೊಡಿ ಎಂದು ಸಾಲು ಸಾಲು ಕಾಂಗ್ರೆಸ್ ಶಾಸಕರು ಖರ್ಗೆ ನಿವಾಸಕ್ಕೆ ಭೇಟಿ ನೀಡುತ್ತಿದ್ದಾರೆ. ಶಿವರಾಜ್ ತಂಗಡಗಿ, ಎಸ್ ಎಸ್ ಮಲ್ಲಿಕಾರ್ಜುನ, ಯು.ಟಿ ಖಾದರ್, ವಿನಯ್ ಕುಲಕರ್ಣಿ, ಕೆ ಎನ್ ರಾಜಣ್ಣ, ಅಜಯ್ ಸಿಂಗ್ ಸೇರಿದಂತೆ ಹಲವು ಶಾಸಕರು ಖರ್ಗೆ ನಿವಾಸದಲ್ಲಿದ್ದಾರೆ.ಹೌದು, ಸಿಎಂ, ಡಿಸಿಎಂ ಆಯ್ಕೆ ಕಗ್ಗಂಟು ಬಿಡಿಸಿದ ಹೈಕಮಾಂಡ್ ಗೆ ಸಚಿವ ಸ್ಥಾನ ನೀಡುವುದು ಕೂಡ ದೊಡ್ಡ ಸವಾಲಿನ ಕೆಲಸವೇ ಆಗಿದೆ. ಹೈಕಮಾಂಡ್ ಸಿಎಂ ಆಯ್ಕೆ ಕಗ್ಗಂಟು ಬಿಡಿಸಿದ ಬೆನ್ನಲ್ಲೇ ಸಚಿವ ಸ್ಥಾನದ ಆಕಾಂಕ್ಷಿಗಳ ಲಾಭಿ ಶುರುವಾಗಿದೆ. ಇಂದು ನಿಯೋಜಿತ ಸಿಎಂ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರು ದೆಹಲಿಗೆ ಸಂಭಾವ್ಯ ಸಚಿವರ ಪಟ್ಟಿಯೊಂದಿಗೆ ದೆಹಲಿಗೆ ತೆರಳಿದ್ದಾರೆ. ಹೈಕಮಾಂಡ್ ಜೊತೆಗೆ ಸಚಿವ ಸಂಪುಟ ರಚನೆ ಸಂಬಂಧ ಚರ್ಚೆ ನಡೆಸಲಿದ್ದಾರೆ.
