ಉದಯವಾಹಿನಿ, ಬೆಂಗಳೂರು:  ತಮಿಳುನಾಡಿಗೆ ಸಡ್ಡು ಹೊಡೆದು ರಾಜ್ಯದಲ್ಲಿ ಎರಡನೇ ಅಂತಾರಾಷ್ಟ್ರೀಯ ವಿಮಾನನಿಲ್ದಾಣ ನಿರ್ಮಾಣಕ್ಕೆ ರಾಜ್ಯಸರ್ಕಾರ ಮುಂದಾಗಿದ್ದು, ಈಗಾಗಲೇ ಸ್ಥಳ ಆಯ್ಕೆಯೂ ಸೇರಿದಂತೆ ಹಲವು ಪ್ರಕ್ರಿಯೆಗಳಿಗೆ ಚಾಲನೆ ನೀಡಿದೆ. ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್‌ ತಮ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರದೊಂದಿಗಿನ ಒಪ್ಪಂದದ ಪ್ರಕಾರ, 2032 ರವರೆಗೂ ಮತ್ತೊಂದು ವಿಮಾನನಿಲ್ದಾಣ ನಿರ್ಮಿಸಲು ಅವಕಾಶ ಇಲ್ಲ. 2033 ರ ನಂತರ ವಿಮಾನನಿಲ್ದಾಣ ಸ್ಥಾಪನೆಗೆ ಯಾವುದೇ ಅಡ್ಡಿ ಇಲ್ಲ ಎಂದರು.
ಆದರೂ ರಾಜ್ಯಸರ್ಕಾರಕ್ಕೆ ವಿಶೇಷ ರಿಯಾಯಿತಿಗಳಿವೆ. ಎಕ್‌್ಸಕ್ಯೂಸ್ಲೀವ್‌ ಕ್ಲಾಸ್‌‍ ನಿಯಮಾವಳಿಗಳ ಅನುಸಾರವೇ ಎರಡನೇ ಅಂತಾರಾಷ್ಟ್ರೀಯ ವಿಮಾನನಿಲ್ದಾಣ ಸ್ಥಾಪನೆಗೆ ನಿರ್ಧರಿಸಲಾಗಿದೆ.ಕೆಲದಿನಗಳ ಹಿಂದೆ ಮೂಲಭೂತ ಸೌಕರ್ಯ ಇಲಾಖೆಯ ಸಭೆ ನಡೆಸಲಾಗಿದ್ದು, 2033 ರವರೆಗೂ ಕಾಯುವ ಅಗತ್ಯವಿಲ್ಲ. ಇದರ ನಡುವೆ ಭೂಸ್ವಾಧೀನ, ಸ್ಥಳ ಆಯ್ಕೆ ಸೇರಿದಂತೆ ಇತರ ಮಾನದಂಡಗಳ ಪರಿಶೀಲನೆ ಆರಂಭವಾಗಿದೆ ಎಂದರು.

2ನೇ ವಿಮಾನನಿಲ್ದಾಣದ ನಿರ್ಮಾಣಕ್ಕೆ ಈಗಾಗಲೇ ಅಸ್ತಿತ್ವದಲ್ಲಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನನಿಲ್ದಾಣದ ಸಂಪರ್ಕವನ್ನು ಪ್ರಮುಖವಾಗಿ ಗಮನದಲ್ಲಿಟ್ಟುಕೊಳ್ಳಬೇಕೇ? ಅಥವಾ ಪ್ರಯಾಣಿಕರ ದಟ್ಟಣೆಯನ್ನು ಪರಿಗಣಿಸಬೇಕೇ? ಎಂಬ ಗೊಂದಲಗಳಿವೆ.  ಗೊಂದಲವನ್ನು ಮೊದಲು ಪರಿಹರಿಸಿಕೊಳ್ಳಬೇಕಿದೆ. ಇದಕ್ಕಾಗಿ ಚರ್ಚೆಗಳು ನಡೆಯುತ್ತಿವೆ. ಅಧಿಕಾರಿಗಳಿಗೂ ವರದಿ ನೀಡಲು ಸೂಚಿಸಲಾಗಿದೆ. ಮುಖ್ಯಮಂತ್ರಿಯವರ ಜೊತೆ ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು. ಯಾರ್ಕ್‌, ಲಂಡನ್‌ನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳು ಹತ್ತಿರದಲ್ಲೇ ಇವೆ.ನಮ ದೇಶದ ಮುಂಬೈನ ಹೊಸ ವಿಮಾನನಿಲ್ದಾಣ, ಹಳೆ ವಿಮಾನ ನಿಲ್ದಾಣಗಳು 35 ಕಿ.ಮೀ.ಅಂತರದಲ್ಲಿವೆ. ಹಾಲಿ ಇರುವ ವಿಮಾನನಿಲ್ದಾಣಕ್ಕೆ ಸಂಪರ್ಕಿಸುವಂತೆ 2ನೇ ವಿಮಾನನಿಲ್ದಾಣ ನಿರ್ಮಿಸುವುದಾದರೆ ಅದಕ್ಕೆ ದೊಡ್ಡಬಳ್ಳಾಪುರ, ದಾಬಸ್‌‍ಪೇಟೆ, ತುಮಕೂರಿನಂತಹ ಸ್ಥಳಗಳನ್ನು ಗುರುತಿಸಲಾಗಿದ್ದು, ಬೆಂಗಳೂರಿನ ಉತ್ತರಭಾಗದ ಕಡೆ ಗಮನ ಹರಿಸಬೇಕಾಗುತ್ತದೆ.

Leave a Reply

Your email address will not be published. Required fields are marked *

error: Content is protected !!