
ಉದಯವಾಹಿನಿ, ಬೆಂಗಳೂರು: ಲೋಕಸಭಾ ಚುನಾವಣೆಗೆ ಇನ್ನೂ ಒಂದು ವರ್ಷ ಬಾಕಿಯಿರುವಂತೆಯೇ ರಾಜ್ಯದಲ್ಲಿ ಭರ್ಜರಿ ಜಯ ಭೇರಿ ಕಾಂಗ್ರೆಸ್ ಪ್ರತಿಪಕ್ಷಗಳನ್ನು ಒಗ್ಗೂಡಿಸುವ ನಿಟ್ಟಿನಲ್ಲಿಯೂ ಕಾರ್ಯತಂತ್ರ ರೂಪಿಸುತ್ತಿದೆ. ಈ ನಿಟ್ಟಿನಲ್ಲಿ ನಾಳೆ ನಡೆಯಲಿರುವ ನೂತನ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಮಮತಾ ಬ್ಯಾನರ್ಜಿ, ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್, ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಸೇರಿದಂತೆ ವಿವಿಧ ಪ್ರತಿಪಕ್ಷಗಳ ಮುಖಂಡರು ಪಾಲ್ಗೊಳ್ಳುವಂತೆ ಆಹ್ವಾನ ನೀಡಲಾಗಿತ್ತು.ಆದರೆ, ಈ ಕಾರ್ಯಕ್ರಮಕ್ಕೆ ಮಮತಾ ಬ್ಯಾನರ್ಜಿ ಆಗಮಿಸುತ್ತಿಲ್ಲ. ಅವರ ಬದಲಿಗೆ ಪಕ್ಷದ ನಾಯಕ ಕಾಕೋಲಿ ಘೋಷ್ ದಸ್ತಿದಾರ್ ಆಗಮಿಸುತ್ತಿದ್ದಾರೆ ಎಂದು ತೃಣಮೂಲ ಕಾಂಗ್ರೆಸ್ ನಾಯಕರೊಬ್ಬರು ತಿಳಿಸಿದ್ದಾರೆ.ಈ ಕುರಿತು ಟ್ವೀಟ್ ಮಾಡಿರುವ ರಾಜ್ಯಸಭಾ ಪಕ್ಷದ ನಾಯಕ ಡೆರೆಕ್ ಓ ಬ್ರಿಯಾನ್, ಕರ್ನಾಟಕದ ನಿಯೋಜಿತ ಸಿಎಂ ಸಿದ್ದರಾಮಯ್ಯ ಮತ್ತು ಅವರ ಸಹೋದ್ಯೋಗಿಗಳ ಪ್ರಮಾಣ ವಚನ ಸಮಾರಂಭಕ್ಕೆ ಎಐಸಿಸಿ ಅಧ್ಯಕ್ಷರೇ ವೈಯಕ್ತಿಕವಾಗಿ ಮಮತಾ ಬ್ಯಾನರ್ಜಿ ಅವರನ್ನು ಆಹ್ವಾಸಿದ್ದರು. ಆದರೆ, ಅವರ ಪರವಾಗಿ ಲೋಕಸಭೆಯಲ್ಲಿನ ಟಿಎಂಸಿ ಉಪ ನಾಯಕ ಕಾಕೊಲಿ ಘೋಷ್ ದಸ್ತಿದಾರ್ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.
