
ಉದಯವಾಹಿನಿ, ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವಿನೊಂದಿಗೆ ಕಾಂಗ್ರೆಸ್ ಮತ್ತೊಮ್ಮೆ ರಾಜ್ಯದಲ್ಲಿ ಅಧಿಕಾರದ ಗದ್ದುಗೆ ಏರಿದ್ದು, 24ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದರು.
ನಗರದ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಪದಗ್ರಹಣ ಸಮಾರಂಭದಲ್ಲಿ ರಾಜ್ಯಪಾಲ ಥಾವರ ಚಂದ್ ಗೆಹ್ಲೋಟ್ ಅವರು ಸಿದ್ದರಾಮಯ್ಯರಿಗೆ ಪ್ರತಿಜ್ಞಾವಿಧಿ ಭೋದಿಸಿದರು.ದೇವರ ಹೆಸರಿನಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದರು.
