ಉದಯವಾಹಿನಿ, ಹುಬ್ಬಳ್ಳಿ: ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ನೆಲ್ಲಿಹರವಿ ಗ್ರಾಮದಲ್ಲಿ ಆತಹತ್ಯೆಗೆ ಮುಂದಾಗಿದ್ದ ವ್ಯಕ್ತಿಯನ್ನು ಉಳಿಸಿ ಕಲಘಟಗಿ ಪೊಲೀಸರು ಮಾನವೀಯತೆ ಮೆರೆದಿದ್ದಾರೆ.ತಾಲ್ಲೂಕಿನ ನೆಲ್ಲಿಹರವಿ ಗ್ರಾಮದ ಶಂಭುಲಿಂಗಯ್ಯ ಹುಲಸೋಗಿ ಕುಡಿದ ಮತ್ತಿನಲ್ಲಿ ನೇಣಿ ಹಾಕಿಕೊಳ್ಳಲು ಮುಂದಾಗಿದ್ದ,ಮನೆಯಲ್ಲಿ ನೇಣು ಬಿಗಿದು ಆತಹತ್ಯೆ ಮಾಡಿಕೊಳ್ಳುತ್ತಿದ್ದಾಗ ಏಕಾಏಕಿ 112ಗೆ ಕರೆ ಬಂದ ಹಿನ್ನಲೆ ಅಲರ್ಟ್ ಆದ ಪೊಲೀಸ್ ಸಿಬ್ಬಂದಿ ಗಣೇಶ್ ಹಾಗೂ ಸಂಗನಗೌಡರ ಅವರು ಸ್ಥಳಕ್ಕೆ ದೌಡಾಯಿಸಿ ನೇಣಿಗೆ ಕೊರಳೊಡ್ಡಿದ ಶಂಭುಲಿಂಗಯ್ಯ ಪ್ರಾಣ ಉಳಿಸಿದ್ದಾರೆ. ಸದ್ಯ ಕಲಘಟಗಿ ತಾಲೂಕ ಆಸ್ಪತ್ರೆಯಲ್ಲಿ ಶಂಭುಲಿಂಗಯ್ಯನಿಗೆ ಚಿಕಿತ್ಸೆ ನೀಡಲಾಗುತ್ತಿದೆ.

 

Leave a Reply

Your email address will not be published. Required fields are marked *

error: Content is protected !!