ಉದಯವಾಹಿನಿ, ಮಂಡ್ಯ: ಇಂದು ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಮತ್ತು ಡಿ.ಕೆ. ಶಿವಕುಮಾರ್ ಉಪಮುಖ್ಯಮಂತ್ರಿಯಾಗಿ ಪ್ರಮಾಣ ಸ್ವೀಕರಿಸಲಿದ್ದಾರೆ. ಈಗಾಗಲೇ ಕಾಂಗ್ರೆಸ್ ಪಕ್ಷದ ಶಾಸಕರು ಮತ್ತು ಅತಿಥಿಗಳು ರಾಜಧಾನಿಗೆ ಆಗಮಿಸಿದ್ದಾರೆ. ಇದರ ನಡುವೆ ಮೇಲುಕೋಟೆ ವಿಧಾನಸಭಾ ಕ್ಷೇತ್ರದ ನೂತನ ಶಾಸಕ ದರ್ಶನ್ ಪುಟ್ಟಣ್ಣಯ್ಯ ಎಲ್ಲರ ಗಮನ ಸೆಳೆದಿದ್ದಾರೆ.ದರ್ಶನ್ ಪುಟ್ಟಣ್ಣಯ್ಯ ಅವರು ಪ್ರಮಾಣ ವಚನ ಕಾರ್ಯಕ್ರಮಕ್ಕೆ ರೈಲಿನಲ್ಲಿ ಆಗಮಿಸುವ ಮೂಲಕ ಸರಳತೆಯನ್ನು ಮೆರೆದಿದ್ದಾರೆ. ನಿನ್ನೆ ರಾತ್ರಿಯೇ ಮಂಡ್ಯದಿಂದ ಸಾಮಾನ್ಯ ಪ್ರಜೆಯಂತೆ ರೈಲಿನಲ್ಲಿ ಆಗಮಿಸಿದ್ದಾರೆ. ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರ ಆಹ್ವಾನದ ಮೇರೆಗೆ ದರ್ಶನ್, ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಭಾಗಿಯಾಗಲು ಬಂದಿದ್ದಾರೆ.ಅಂದಹಾಗೆ ದರ್ಶನ್ ಪುಟ್ಟಣ್ಣಯ್ಯ ಅವರು ಪುಟ್ಟರಾಜು ವಿರುದ್ಧ ಜಯ ದಾಖಲಿಸಿದರು. ಸರ್ವೋದಯ ಕರ್ನಾಟಕ ಪಕ್ಷದಿಂದ ದರ್ಶನ್ ಸ್ಪರ್ಧಿಸಿದರು. ಅವರ ವಿರುದ್ಧ ಅಭ್ಯರ್ಥಿಯನ್ನು ಕಣಕ್ಕಿಳಿಸದೆ ಕಾಂಗ್ರೆಸ್ ಬೆಂಬಲ ನೀಡಿತು. ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿರುವ ದರ್ಶನ್ ಪುಟ್ಟಣ್ಣಯ್ಯ ಮೇಲೆ ಜನರ ನಿರೀಕ್ಷೆ ತುಂಬಾ ಇದೆ.
