ಉದಯವಾಹಿನಿ, ಬೆಂಗಳೂರು: ವಾಲೀಕಿ ಪರಿಶಿಷ್ಟ ಪಂಗಡಗಳ ಹಗರಣದಲ್ಲಿ ಬಂಧಿತರಾಗಿರುವವರ ಮೇಲೆ ಜಾರಿ ನಿರ್ದೇಶನಾಲಯ ಒತ್ತಡ ಹೇರಿ ಸರ್ಕಾರದ ಪ್ರಮುಖರ ಹೆಸರು ಹೇಳಿಸುವ ಪ್ರಯತ್ನ ನಡೆಸುತ್ತಿದ್ದು, ಕಾಂಗ್ರೆಸ್ ಸರ್ಕಾರವನ್ನು ಪತನಗೊಳಿಸುವ ಪ್ರಯತ್ನ ನಡೆಸಿದೆ. ಇದಕ್ಕೆ ನಾವು ಹೆದರುವುದಿಲ್ಲ. ಕಾನೂನಾತಕವಾಗಿ ಹಾಗೂ ಪ್ರಜಾಸತ್ತಾತಕವಾಗಿ ಹೋರಾಟ ಮುಂದುವರೆಸುತ್ತೇವೆ ಎಂದು ಸಚಿವರ ತಂಡ ಘೋಷಣೆ ಮಾಡಿದೆ.ವಿಧಾನಸೌಧದ ಸಭಾಂಗಣದಲ್ಲಿ ಜಂಟಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ಕಂದಾಯ ಸಚಿವ ಕೃಷ್ಣಾಭೈರೇಗೌಡ, ಇಂಧನ ಸಚಿವ ಕೆ.ಜೆ.ಜಾರ್ಜ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಪ್ರಿಯಾಂಕ ಖರ್ಗೆ, ಕಾರ್ಮಿಕ ಸಚಿವ ಸಂತೋಷ್ ಲಾಡ್, ಶಾಸಕ ಎ.ಎಸ್.ಪೊನ್ನಣ್ಣ ಮಾತನಾಡಿದರು.
ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಅವರು, ಇ.ಡಿ. ತನಿಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಸರ್ಕಾರವನ್ನು ಬುಡಮೇಲು ಮಾಡುವ ಹುನ್ನಾರ ನಡೆಸಿದೆ ಎಂದು ಗಂಭೀರ ಆರೋಪ ಮಾಡಿದರು.ಕೃಷ್ಣಾಭೈರೇಗೌಡ ಮಾತನಾಡಿ, ಜಾರಿ ನಿರ್ದೇಶನಾಲಯ ಬಂಧಿತರ ಮೇಲೆ ಒತ್ತಡ ಹೇರತ್ತಿದ್ದು, ಸರ್ಕಾರದ ಪ್ರಮುಖರ ಹೆಸರನ್ನು ಹೇಳಿದರೆ ನಿಮನ್ನು ರಕ್ಷಿಸುತ್ತೇವೆ. ಇಲ್ಲದೇ ಹೋದರೆ ಜಾರಿ ನಿರ್ದೇಶನಾಲಯದ ಶಕ್ತಿ ಏನು ಎಂದು ತೋರಿಸುತ್ತೇವೆ ಎಂಬ ಬೆದರಿಕೆ ಹಾಕುತ್ತಿದ್ದಾರೆ.
