ಉದಯವಾಹಿನಿ, ಬೆಂಗಳೂರು: ವಿಧಾನಸಭೆಯಲ್ಲಿಂದು ಆಡಳಿತ ಹಾಗು ಪ್ರತಿಪಕ್ಷಗಳ ನಡುವೆ ಹಗರಣಗಳ ಸದ್ದು ಜೋರಾಗಿ ನಡೆದು ಇಡೀ ಸದನದಲ್ಲಿ ಕಾವೇರಿದ ವಾತಾವರಣ ನಿರ್ಮಾಣವಾಗಿತ್ತು. ಸಾರ್ವಜನಿಕ ಮಹತ್ವದ ವಿಷಯ ನಿಯಮ-69ರಡಿ ಇಂದು ಪ್ರತಿಪಕ್ಷದ ನಾಯಕ ಅಶೋಕ್‌ ಅವರು ವಾಲೀಕಿ ನಿಗಮದಲ್ಲಿ ಪರಿಶಿಷ್ಟರ ಹಣ ಲೂಟಿ ಮಾಡಲಾಗಿದೆ ಎಂದು ಸಿಎಂ ವಿರುದ್ಧ ನೇರ ವಾಗ್ದಾಳಿ ನಡೆಸಿದಾಗ ಆಡಳಿತ ಪಕ್ಷದ ಸಚಿವರು, ಶಾಸಕರು ಅದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಬಿಜೆಪಿ ಆಡಳಿತದಲ್ಲಿ ನೀವು ಎಷ್ಟು ಹಗರಣ ಮಾಡಿದ್ದೀರಿ ಎಂದು ತಿರುಗೇಟು ನೀಡಿದರು.
ಪ್ರತಿಪಕ್ಷದ ಶಾಸಕರಾದ ಬಸವರಾಜ ಪಾಟೀಲ್ ಯತ್ನಾಳ್‌, ಅರವಿಂದ ಬೆಲ್ಲದ್‌ ಸೇರಿದಂತೆ ಇತರರು ಚರ್ಚೆಯಲ್ಲಿ ಭಾಗಿಯಾಗಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಅಭಿವೃದ್ಧಿ ಕುಂಠಿತವಾಗಿದೆ ಎಂದು ಟೀಕಿಸಿದರು.
ಇದಕ್ಕೆ ಪ್ರತಿಯಾಗಿ ಸಚಿವರಾದ ಪ್ರಿಯಾಂಕ್‌ ಖರ್ಗೆ, ಎಚ್‌.ಸಿ.ಮಹದೇವಪ್ಪ, ದಿನೇಶ್‌ ಗುಂಡೂರಾವ್‌, ಶಾಸಕ ನರೇಂದ್ರ ಸ್ವಾಮಿ, ಪ್ರಕಾಶ್‌ ಕೋಳಿವಾಡ ಸೇರಿದಂತೆ ಹಲವರು ಪ್ರತಿಪಕ್ಷದ ಶಾಸಕರ ಟೀಕೆಗೆ ಅಡ್ಡಿ ಉಂಟುಮಾಡಿ ತಿರುಗೇಟು ನೀಡಿದರು.
ಒಟ್ಟಾರೆ ಕಳೆದ ಮೂರು ದಿನಗಳಿಂದ ಹಗರಣಗಳ ಕುರಿತು ಪದೇ ಪದೇ ಆಡಳಿತ, ಪ್ರತಿಪಕ್ಷಗಳ ನಡುವೆ ಕಾವೇರಿದ ಚರ್ಚೆ ನಡೆಯುತ್ತಿದೆ.
ಈ ವೇಳೆ ಬಿಜೆಪಿ ಶಾಸಕರು ಮತ್ತೆ ಸಿಎಂ ಸಿದ್ದರಾಮಯ್ಯವಿರುದ್ಧ ಮುಗಿಬಿದ್ದು 100 ಪರ್ಸೆಂಟ್‌ ಸಿಎಂ ಎಂದು ಗಂಭೀರ ಆರೋಪ ಮಾಡಿದಾಗ ಕೆಂಡಾಮಂಡಲವಾದ ಮುಖ್ಯಮಂತ್ರಿಯವರು ನಿಮ ಹಗರಣಗಳನ್ನು ಹೊರ ತೆಗೆಯುತ್ತೇನೆ ಎಂದು ಎಚ್ಚರಿಸಿದಾಗ ಸದನ ಕಾವೇರಿತು.
ದಲಿತ ಪದ ಬಳಕೆ ಮಾಡುವಂತಿಲ್ಲ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರು ಎಂದು ಹೇಳಿ ಎಂದು ಸಲಹೆ ನೀಡಿದರು.ಈ ಸಂದರ್ಭದಲ್ಲಿ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌, ಅಶ್ವತ್‌ ನಾರಾಯಣ, ಸುರೇಶ್‌ ಕುಮಾರ್‌ ಮತ್ತಿತರರು ಎದ್ದು ನಿಂತ ಅಹಿಂದ ಬಳಕೆ ಮಾಡಿದ್ದು ನೀವೆ ಅಲ್ಲವೇ ಎಂದು ತೀರುಗೇಟು ನೀಡಿದರು.

Leave a Reply

Your email address will not be published. Required fields are marked *

error: Content is protected !!