ಉದಯವಾಹಿನಿ, ಬೆಂಗಳೂರು: ಯಾವುದೇ ಕಾರಣಕ್ಕೂ ರಾಜ್ಯವನ್ನು ಉಡ್ತಾ ಕರ್ನಾಟಕವನ್ನಾಗಿ ಮಾಡಲು ರಾಜ್ಯಸರ್ಕಾರ ಬಿಡುವುದಿಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ವಿಧಾನಪರಿಷತ್‌ನಲ್ಲಿ ಪುನರುಚ್ಚರಿಸಿದರು. ಬಿಜೆಪಿ ಸದಸ್ಯ ಡಾ.ಧನಂಜಯ ಸರ್ಜಿಯವರ ಪ್ರಶ್ನೆಗೆ ಉತ್ತರಿಸಿದ ಅವರು, ಈ ಹಿಂದೆ ಕೆಲವು ಸದಸ್ಯರು ಕರ್ನಾಟಕವು ಪಂಜಾಬ್‌ನಂತೆ ಉಟ್ತಾ ಕರ್ನಾಟಕವಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದ್ದರು. ನಾನು ಒಬ್ಬ ಗೃಹಸಚಿವನಾಗಿ ಜವಾಬ್ದಾರಿಯುತ ಸ್ಥಾನದಲ್ಲಿದ್ದು, ಸ್ಪಷ್ಟವಾಗಿ ಹೇಳುತ್ತಿದ್ದೇನೆ. ಎಂತಹ ಸಂದರ್ಭದಲ್ಲೂ ಕರ್ನಾಟಕವನ್ನು ಉಟ್ತಾ ಪಂಜಾಬ್‌ ಮಾಡಲು ಬಿಡುವುದಿಲ್ಲ. ಇದಕ್ಕೆ ಎಲ್ಲಾ ರೀತಿಯ ಕ್ರಮಗಳನ್ನು ತೆಗೆದುಕೊಳ್ಳಲಿದ್ದೇವೆ ಎಂದು ಸದನಕ್ಕೆ ತಿಳಿಸಿದರು.
ಸರ್ಕಾರವು ಡ್ರಗ್ಸ್‌‍ ಮುಕ್ತ ಕರ್ನಾಟಕ ನಿರ್ಮಾಣದ ಘೋಷಣೆ ಮಾಡಿದ್ದು, ಯಾವುದೇ ಕಾರಣಕ್ಕು ಉಡ್ತಾ ಕರ್ನಾಟಕ ಆಗಲು ಬಿಡುವುದಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು.
ರಾಜ್ಯದಲ್ಲಿ ಕಾಲೇಜು ವಿದ್ಯಾರ್ಥಿಗಳು ಮಾದಕ ವ್ಯಸನಿಗಳಾಗುತ್ತಿರುವುದು ಗಮನಕ್ಕೆ ಬಂದಿದೆಯೇ, ದಾಖಲಾಗಿರುವ ಪ್ರಕರಣಗಳೆಷ್ಟು ಮತ್ತು ಎಷ್ಟು ಪ್ರಕರಣಗಳಲ್ಲಿ ಶಿಕ್ಷೆಯಾಗಿದೆ ಆಗಿದೆ ಎಂಬ ಪ್ರಶ್ನೆಗೆ ಅವರು ಉತ್ತರಿಸಿದರು.
ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಕೆ ಮಾಡುವ ಪೆಡ್ಲರ್‌ಗಳ ಮೇಲೆ ಕ್ರಮ ತೆಗೆದುಕೊಳ್ಳುವ ಪ್ರಕ್ರಿಯೆ ನಿರಂತರವಾಗಿ ನಡೆಯುತ್ತಿದೆ. ಶಾಲಾ-ಕಾಲೇಜುಗಳಲ್ಲಿ ಮಾದಕ ದ್ರವ್ಯ ಕುರಿತು ವಿದ್ಯಾರ್ಥಿಗಳಿಗಾಗಿ ಜಾಗೃತಿ ಮೂಡಿಸಲು ಕಾರ್ಯಕ್ರಮಗಳನ್ನು ಹಮಿಕೊಂಡಿದ್ದೇವೆ. ಕಳೆದ ವರ್ಷ 2023ರಲ್ಲಿ 2409 ಶಾಲಾ-ಕಾಲೇಜುಗಳಲ್ಲಿ 3.95 ಲಕ್ಷ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಲಾಗಿತ್ತು. ಪ್ರಸಕ್ತ ವರ್ಷ ಜೂನ್‌ನಲ್ಲಿ 3,600 ಶಾಲಾ-ಕಾಲೇಜುಗಳಲ್ಲಿ 5.50 ಲಕ್ಷ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಿದ್ದೇವೆ. ಯಾವುದೇ ಕಾರಣಕ್ಕೂ ವಿದ್ಯಾರ್ಥಿಗಳ ಕೈಗೆ ಡ್ರಗ್‌್ಸ ಸಿಗಬಾರದು ಎಂಬುದು ನಮ ಉದ್ದೇಶ. ಅವರಿಗೆ ಜಾಗೃತಿ ಮೂಡಿಸಿದರೆ ಡ್ರಗ್‌್ಸ ತೆಗೆದುಕೊಳ್ಳಲು ಹಿಂಜರಿಯುತ್ತಾರೆ ಎಂಬ ನಿಟ್ಟಿನಲ್ಲಿ ಕಾರ್ಯಕ್ರಮ ನಡೆಸಲಾಗಿದೆ ಎಂದು ಗೃಹ ಸಚಿವ ಪರಮೇರ್ಶ್ವ ಅವರು ತಿಳಿಸಿದರು.

Leave a Reply

Your email address will not be published. Required fields are marked *

error: Content is protected !!