ಉದಯವಾಹಿನಿ, ಬೆಂಗಳೂರು:  ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದಲ್ಲಿ ಪಾರದರ್ಶಕ ಪ್ರಾಮಾಣಿಕ ಆಡಳಿತ ಅಲ್ಲ; ಪಾರದರ್ಶಕ ಭ್ರಷ್ಟ ಆಡಳಿತ..!ವನ್ನು ಜಾರಿ ಮಾಡಿದ್ದಾರೆ ಎಂದು ಬಿಜೆಪಿ ವಿಧಾನಪರಿಷತ್‌ ಸದಸ್ಯ ಸಿ.ಟಿ.ರವಿ ಟೀಕಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾರದರ್ಶಕ ಪ್ರಾಮಾಣಿಕ ಆಡಳಿತ ಅಲ್ಲ; ಪಾರದರ್ಶಕ ಭ್ರಷ್ಟ ಆಡಳಿತ ಇದು. ಅವರ 40 ವರ್ಷಗಳ ರಾಜಕೀಯ ಜೀವನದಲ್ಲಿ ಒಂದೇ ಒಂದು ಕಪ್ಪು ಚುಕ್ಕಿ ಇಲ್ಲ. ಆದರೆ, ಆಡಳಿತದಲ್ಲಿ ಪೂರ್ಣ ಇರುವುದು ಭ್ರಷ್ಟಾಚಾರ ಮಾತ್ರ ಎಂದು ವ್ಯಂಗ್ಯವಾಡಿದರು.
ಇವತ್ತು ಬಿಜೆಪಿ ಮತ್ತು ಜೆಡಿಎಸ್‌‍ ವಿಧಾನಪರಿಷತ್‌ ಸದಸ್ಯರು ಗಾಂಧಿ ಪ್ರತಿಮೆಯ ಮುಂದೆ ಈ ಭ್ರಷ್ಟ ಕಾಂಗ್ರೆಸ್‌‍ ಸರಕಾರದ ರೇಟ್‌ ಕಾರ್ಡ್‌ ಪ್ರದರ್ಶನ ಮಾಡಿದ್ದೇವೆ ಎಂದು ತಿಳಿಸಿದರು.
ನೀವು ಯಾರು ಬೇಕಿದ್ದರೂ ಇದನ್ನು ಪರಿಶೀಲಿಸಬಹುದು; ಇದು ಶೇ 100ರಷ್ಟು ಪಕ್ಕಾ ಇರುವ ಕಾಂಗ್ರೆಸ್‌‍ ರೇಟ್‌ ಕಾರ್ಡ್‌ ಎಂದು ಹೇಳಿದರು.ಜಾತಿ ಬಲ ಇದ್ದರೆ ನೀವು ಶೇ 10ರಷ್ಟು ಕಡಿಮೆ ಮಾಡಿಕೊಳ್ಳಬಹುದು. ಇಲ್ಲದೇ ಇದ್ದರೆ ಇನ್ನೂ ಶೇ 10ರಷ್ಟು ಜಾಸ್ತಿ ಕೊಡಬೇಕಾಗಿ ಬರಬಹುದು ಎಂದು ವಿಶ್ಲೇಷಿಸಿದರು. ಆದರೆ, ಈ ರೇಟ್‌ ಕಾರ್ಡ್‌ ಫಿಕ್‌್ಸ ಮಾಡಿರುವುದು ಪಕ್ಕಾ. ರೇಟ್‌ ಕಾರ್ಡ್‌ ಹೀಗಿದೆ ಎಂದು ಮಾಹಿತಿ ನೀಡಿದರು. ಬೆಂಗಳೂರಿನಲ್ಲಿ ನಗರಾಭಿವೃದ್ಧಿ ಇಲಾಖೆ ರೇಟ್‌ ಕಾರ್ಡ್‌ ಅನುಗುಣವಾಗಿ ಎಫ್‌‍ಎಆರ್‌ (ಫ್ಲೋರ್‌ ಏರಿಯ ರೇಷಿಯೋ) ಒಂದು ಚದರಡಿಗೆ 100 ರೂ, ಸಿಎಲ್‌‍ಯು (ಚೇಂಜ್‌ ಆಫ್‌ ಲ್ಯಾಂಡ್‌ ಯೂಸ್‌‍- ಭೂ ಪರಿವರ್ತನೆಗೆ) ಒಂದು ಎಕರೆಗೆ 27 ಲಕ್ಷ ಫಿಕ್‌್ಸ ಆಗಿದೆ. ಗೃಹ ಇಲಾಖೆಯಲ್ಲಿ ಪೊಲೀಸ್‌‍ ಇನ್‌‍ಸ್ಪೆಕ್ಟರ್ಗೆ 50 ಲಕ್ಷದಿಂದ ಒಂದು ಕೋಟಿ ಇದು, ಅದು ಜಾಗದ ಮೇಲೆ ಕಿಮ್ಮತ್ತು ಹೆಚ್ಚು ಕಡಿಮೆ ಆಗುತ್ತದೆ ಎಂದು ತಿಳಿಸಿದರು.

Leave a Reply

Your email address will not be published. Required fields are marked *

error: Content is protected !!