ಉದಯವಾಹಿನಿ, ಬೆಂಗಳೂರು: ಬಿಜೆಪಿ ಆಡಳಿತದ ಅವಧಿಯಲ್ಲಿ ವಿವಿಧ ನಿಗಮಗಳಲ್ಲಿ ನಡೆದಿರುವ 300 ಕೋಟಿ ರೂ.ಗಳ ಬೃಹತ್ ಹಗರಣವನ್ನು ಸದನದಲ್ಲಿ ಬಹಿರಂಗ ಪಡಿಸುವುದಾಗಿ ಉಪ ಮುಖ್ಯಮಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯ ಅಧಿಕಾರಾವಯಲ್ಲಿ 300 ಕೋಟಿ ರೂ. ಗಳಿಗೂ ಹೆಚ್ಚು ಹಣದ ಅವ್ಯವಹಾರವಾಗಿದೆ. ಯಾವ್ಯಾವ ನಿಗಮಗಳಲ್ಲಿ ಅಕ್ರಮವಾಗಿದೆ, ಯಾರ್ಯಾರು ಅಧ್ಯಕ್ಷರಾಗಿದ್ದರು, ಯಾರು ಆ ಅವಯಲ್ಲಿ ಮುಖ್ಯಮಂತ್ರಿಗಳಾಗಿದ್ದರು ಎಂಬ ಎಲ್ಲಾ ವಿವರಗಳನ್ನು ಸದನದಲ್ಲಿ ಬಹಿರಂಗಪಡಿಸುವುದಾಗಿ ಅವರು ಹೇಳಿದರು.
ಈಗಾಗಲೇ ಕೆಲವು ನಿಗಮಗಳ ಭ್ರಷ್ಟಾಚಾರದ ತನಿಖೆ ನಡೆಯುತ್ತಿದೆ. ಇನ್ನೂ ಕೆಲವು ನಿಗಮಗಳ ಅವ್ಯವಹಾರದ ತನಿಖೆ ಮುಂದುವರಿದಿದೆ ಎಂದು ಹೇಳಿದರು.ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಕ್ರಮದ ಬಗ್ಗೆ ಈಗಾಗಲೇ ತನಿಖೆ ನಡೆಯುತ್ತಿದೆ. ಅದರ ಬಗ್ಗೆ ಚರ್ಚೆ ಮಾಡುವುದು ಅನವಶ್ಯಕ ಆದರೆ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾವಿದ್ದೇವೆ. ಅದಕ್ಕಾಗಿ ಚರ್ಚೆಗೆ ಅವಕಾಶ ಕೊಟ್ಟಿದ್ದೇವೆ. ಪ್ರಕರಣದ ಬಗ್ಗೆ ತನಿಖೆಗಾಗಿ ಎಸ್ಐಟಿ ರಚನೆ ಮಾಡಿದ್ದೇವೆ. 89 ಕೋಟಿ ಅಕ್ರಮ ಹಣ ವರ್ಗಾವಣೆಯಲ್ಲಿ ಈಗಾಗಲೇ 34 ಕೋಟಿ ರೂ.ಗಳನ್ನು ವಸೂಲು ಮಾಡಲಾಗಿದೆ. ವ್ಯಾಪಕ ತನಿಖೆ ನಡೆಯುತ್ತಿದೆ. ಪ್ರತಿಪಕ್ಷಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನ ರಾಜಿನಾಮೆ ನೀಡುವಂತೆ ಒತ್ತಾಯಿಸುತ್ತಿದ್ದಾರೆ. ಆದರೆ ಬ್ಯಾಂಕ್ನಲ್ಲಿ ನಡೆದಿರುವ ಅಕ್ರಮಕ್ಕೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ರಾಜೀನಾಮೆ ನೀಡಬೇಕಲ್ಲವೇ ಎಂದು ಅವರು ತಿರುಗೇಟು ನೀಡಿದರು.

Leave a Reply

Your email address will not be published. Required fields are marked *

error: Content is protected !!