ಉದಯವಾಹಿನಿ, ಶೃಂಗೇರಿ: ಶೃಂಗೇರಿ ಶ್ರೀ ಶಾರದಾ ಪೀಠವು ಆಗಸ್ಟ್ 15 – 2024 ರಿಂದ ಶ್ರೀ ಶಾರದಮ್ಮನವರ ದರ್ಶನಕ್ಕೆ ಹಾಗೂ ಗುರುಗಳ ದರ್ಶನಕ್ಕೆ ಆಗಮಿಸುವ ಭಕ್ತಾದಿಗಳು ಕಡ್ಡಾಯವಾಗಿ ಭಾರತೀಯ ಸಂಪ್ರದಾಯಿಕ ಉಡುಗೆಯಲ್ಲಿ ಬರುವಂತೆ ಸೂಚಿಸಿ ಆಡಳಿತಾಧಿಕಾರಿಗಳು ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಭಾರತೀಯ ಸಾಂಪ್ರದಾಯಕವಲ್ಲದ ಉಡುಗೆಯನ್ನು ತೊಟ್ಟು ಬಂದವರಿಗೆ ಶ್ರೀ ಶಾರದಾಂಬೆ ದೇವಸ್ಥಾನದ ಅರ್ಧ ಮಂಟಪದ ಒಳಗೆ ಪ್ರವೇಶವಿರುವುದಿಲ್ಲ. ಅಂತವರು ಹೊರಗಿನ ಪ್ರಕಾರದಿಂದಲೇ ದೇವರ ದರ್ಶನವನ್ನು ಪಡೆಯಬೇಕಾಗುತ್ತದೆ.ಪುರುಷರಾದಲ್ಲಿ ಧೋತಿ ಶಲ್ಯ ಮತ್ತು ಉತ್ತರೀಯ ಹಾಗೂ ಮಹಿಳೆಯರು ಸೀರೆ ರವಿಕೆ, ಸಲ್ವಾರ್ – ದುಪಟ್ಟ ಅಥವಾ ಲಂಗ ದಾವಣಿಗಳಂತ ಸಾಂಪ್ರದಾಯಿಕ ಉಡುಗೆಗಳನ್ನು ಧರಿಸಿ ದೇವರ ದರ್ಶನ ಮಾಡಬಹುದು.

 

Leave a Reply

Your email address will not be published. Required fields are marked *

error: Content is protected !!