ಉದಯವಾಹಿನಿ, ಬೆಂಗಳೂರು: ರಾಜ್ಯಾದ್ಯಂತ ಮಳೆಯ ಆರ್ಭಟ ಮುಂದುವರಿದಿದೆ, ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಮುಂದಿನ ಕೆಲ ದಿನಗಳ ಕಾಲ ಮಳೆಯ ಪ್ರಮಾಣ ಮುಂದುವರಿಯಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಇಂದು ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ.
ಭಾರತೀಯ ಹವಾಮಾನ ಇಲಾಖೆಯು ಇಂದು ಕರ್ನಾಟಕದ ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ.
ಅಲ್ಲದೆ, ಜುಲೈ ೨೫ರವರೆಗೆ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಹಳದಿ ಅಲರ್ಟ್ ಘೋಷಿಸಿದೆ.
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರುತ್ತದೆ. ಹಗಲಿನಲ್ಲಿ ಆಗಾಗ್ಗೆ ಮಳೆಯಾಗುವ ಸಾಧ್ಯತೆಯೂ ಇದೆ. ಮುಂದಿನ ಕೆಲವು ದಿನಗಳ ಕಾಲ ಇದೇ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.
ಮುಂದಿನ ೨೪ ಗಂಟೆಗಳ ಕಾಲ ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಸ್ಥಳೀಯ ಮುನ್ಸೂಚನೆ: ಹೆಚ್ಚಾಗಿ ಮೋಡ ಕವಿದ ವಾತಾವರಣ. ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ನಿರಂತರ ಗಾಳಿಯ ವೇಗ (೪೦-೫೦ ಕಿಮೀ) ತಲುಪುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ ೨೭ ಲಿ ಸಿ ಮತ್ತು ೨೧ ಲಿ ಸಿ ಆಗಿರುತ್ತದೆ.
ಮುಂದಿನ ೪೮ ಗಂಟೆಗಳ ಕಾಲ ಹೆಚ್ಚಾಗಿ ಮೋಡ ಕವಿದ ವಾತಾವರಣ. ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ನಿರಂತರ ಗಾಳಿಯ ವೇಗ (೩೦-೪೦ ಕಿಮೀ) ತಲುಪುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ ೨೭ ಲಿ ಸಿ ಮತ್ತು ೨೧ ಲಿ ಸಿ ಆಗಿರುತ್ತದೆ.
ಹುಬ್ಬಳ್ಳಿಯಲ್ಲಿ ಸತತ ಮಳೆಯಿಂದಾಗಿ ಕೆರೆಗಳು ಜೀವ ಪಡೆದಿವೆ. ಉಣಕಲ್ ಕೆರೆ ತುಂಬಿ ಹರಿಯುತ್ತಿದೆ. ಹುಬ್ಬಳ್ಳಿ ನಗರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಮಳೆಯಿಂದ ಉಣಕಲ್ ಕೆರೆ ತುಂಬಿದೆ. ಕೆರೆಯಿಂದ ನೀರು ಹರಿದು ರಾಜಕಾಲುವೆ ಸೇರುತ್ತದೆ. ನದಿ ಹರಿಯುವ ಸುಂದರ ದೃಶ್ಯಗಳು ಪ್ರವಾಸಿಗರನ್ನು ಆಹ್ವಾನಿಸುತ್ತಿವೆ.
