ಉದಯವಾಹಿನಿ, ಬೆಂಗಳೂರು: ದೇವರ ಹೆಸರಿನಲ್ಲಿ ಮುಖ್ಯಮಂತ್ರಿಯಾಗಿ ಸಿದ್ಧರಾಮಯ್ಯ, ಗಂಗಾಧರ ಅಜ್ಜಯನ ಹೆಸರಿನಲ್ಲಿ ಉಪ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದ ಬಳಿಕ, 8 ಮಂದಿ ಶಾಸಕರ ಸಂಪುಟ ದರ್ಜೆಯ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.ಹೀಗೆ ಸಿಎಂ, ಡಿಸಿಎಂ ಆಗಿ ಆಯ್ಕೆಯಾದಂತವರಿಗೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅಭಿನಂದನೆ ತಿಳಿಸಿದ್ದಾರೆ.ಈ ಕುರಿತಂತೆ ಇಂದು ಟ್ವಿಟ್ ಮಾಡಿರುವಂತ ಅವರು, ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಸಿದ್ದರಾಮಯ್ಯ ಅವರು ಹಾಗೂ ಅವರ ಸಚಿವ ಸಂಪುಟ ಸದಸ್ಯರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ತಿಳಿಸಿದ್ದಾರೆ.
