ಉದಯವಾಹಿನಿ, ಬೆಂಗಳೂರು; ಕಾಂಗ್ರೆಸ್ ಪಕ್ಷದಿಂದ ಚುನಾವಣೆಗೂ ಮುನ್ನಾ ರಾಜ್ಯದ ಜನತೆಗೆ ಐದು ಗ್ಯಾರಂಟಿಗಳನ್ನು ಜಾರಿಗೊಳಿಸುವಂತ ಭರವಸೆಗಳನ್ನು ನೀಡಲಾಗಿತ್ತು. ಆ ಯೋಜನೆಗಳನ್ನು ಮೊದಲ ಕ್ಯಾಬಿನೆಟ್ ನಲ್ಲಿಯೇ ಅಧಿಕೃತವಾಗಿ ಆದೇಶದ ಮೂಲಕ ಜಾರಿಗೊಳಿಸಲಾಗುತ್ತದೆ ಎಂಬುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಘೋಷಿಸಿದರು.
ಇಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದಂತ ಸಿಎಂ, ಡಿಸಿಎಂ, ಶಾಸಕರು ಸಂಪುಟ ದರ್ಜೆಯ ಸಚಿವರಾಗಿ ಪ್ರಮಾಣವಚನ ಕಾರ್ಯಕ್ರಮದ ಬಳಿಕ ಮಾತನಾಡಿದಂತ ಅವರು, ವೇದಿಕೆಯ ಮೇಲೆ ಎಲ್ಲರಿಗೂ ಎಲ್ಲರಿಗೂ ಧನ್ಯವಾದಗಳು. ಕಾಂಗ್ರೆಸ್ ಸರ್ಕಾರ ಕರ್ನಾಟಕದಲ್ಲಿ ಅಧಿಕಾರಕ್ಕೆ ತಂದಂತ ಮತದಾರರಿಗೆ, ಸ್ಪಷ್ಟ ಬಹುಮತ ಕೊಟ್ಟ ಎಲ್ಲರಿಗೂ ಹೃದಯಪೂರ್ವಕ ಧನ್ಯವಾದಗಳನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಿಳಿಸಿದರು.ಕಾಂಗ್ರೆಸ್ ಪಕ್ಷಕ್ಕೆ ಬಹುಮತ ನೀಡಿದ್ದರ ಹಿಂದೆ ಬಿಜೆಪಿಯ ದುರಾಡಳಿತ, ಭ್ರಷ್ಟಾಚಾರವೇ ಕಾರಣವಾಗಿದೆ. ನಾವು ಎಲ್ಲಾ ವರ್ಗದವರ ಪರವಾಗಿ ನಿಲ್ಲುತ್ತೇವೆ. ಎಲ್ಲಾ ಸಮುದಾಯದಕ್ಕೂ ಸಮಾನತೆಯನ್ನು ಕಲ್ಪಿಸುತ್ತೇವೆ ಎಂದು ಹೇಳಿದರು.
ನಾವು ಕೊಟ್ಟಂತ ಐದು ಗ್ಯಾರಂಟಿಗಳನ್ನು ಈಡೇರಿಸಲಾಗುತ್ತದೆ. ಗೃಹ ಜ್ಯೋತಿ, ಗೃಹ ಲಕ್ಷ್ಮಿ, ಅನ್ನಭಾಗ್ಯ, ಉಚಿತ ಬಸ್ ಪಾಸ್ ಮಹಿಳೆಯರಿಗೆ ನೀಡುವ ಕೆಲಸವನ್ನು ಮಾಡಲಾಗುತ್ತದೆ. ಯುವ ನಿಧಿಯಂತೆ ನಿರುದ್ಯೋಗಿ ಪದವಿ, ಡಿಪ್ಲೋಮಾದವರಿಗೆ ಗೌರವ ಧನ ನೀಡಲಾಗುತ್ತದೆ ಎಂದರು.ನಾವು ಸುಳ್ಳು ಆಶ್ವಾಸನೆ ನೀಡುವುದಿಲ್ಲ. ನಾವು ನೀಡಿದಂತ ಐದು ಗ್ಯಾರಂಟಿಗಳನ್ನು ಜಾರಿಗೊಳಿಸುತ್ತೇವೆ. ಕೆಲವೇ ದಿನಗಳಲ್ಲಿ ಕರ್ನಾಟಕ ನೂತನ ಕಾಂಗ್ರೆಸ್ ಸರ್ಕಾರದ ಮೊದಲ ಕ್ಯಾಬಿನೆಟ್ ನಡೆಯಲಿದೆ. ಅದರಲ್ಲಿ ನೀಡಿದಂತ ಐದು ಗ್ಯಾರಂಟಿ ಯೋಜನೆಗಳನ್ನು ಅಧಿಕೃತವಾಗಿ ಆದೇಶದ ಮೂಲಕ ಜಾರಿಗೆ ತಲುವಂತ ಕೆಲಸ ಮಾಡಲಾಗುತ್ತದೆ ಎಂದು ತಿಳಿಸಿದರು.
