ಉದಯವಾಹಿನಿ, ಬೆಂಗಳೂರು: ಮುಖ್ಯಮಂತ್ರಿಯಾಗಿ ಸಿದ್ಧರಾಮಯ್ಯ 2ನೇ ಬಾರಿಗೆ, ಉಪ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಅವರು ಇಂದು ಪ್ರಮಾಣವಚನ ಸ್ವೀಕರಿಸಿದರು.ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದಂತ ಬೃಹತ್ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು, ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳಿಗೆ ಗೌಪ್ಯ ಪ್ರಮಾಣವಚನ ಭೋಧಿಸಿದರು.ಕರ್ನಾಟಕದ ಮುಖ್ಯಮಂತ್ರಿಯಾಗಿ ಇಂದು ದೇವರ ಹೆಸರಿನಲ್ಲಿ ಸಿದ್ಧರಾಮಯ್ಯ ಅವರು 2ನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಿದರು. ಉಪ ಮುಖ್ಯಮಂತ್ರಿಯಾಗಿ ಅಜ್ಜಯ್ಯನ ಹೆಸರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದರು.ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್ ಪಿ) ಮುಖ್ಯಸ್ಥ ಸಿದ್ದರಾಮಯ್ಯ ಮತ್ತು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಇಂದು ಕ್ರಮವಾಗಿ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.
