ಉದಯವಾಹಿನಿ, ಕುಂದಾಪುರ: ಇಲ್ಲಿಗೆ ಸಮೀಪದ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಗುರುವಾರ ಭೇಟಿ ನೀಡಿದ ಸಿನಿಮಾ ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಅವರು, ಮೂಕಾಂಬಿಕಾ ದೇವಿಯ ದರ್ಶನ ಪಡೆದು, ಪತಿಯ ಶೀಘ್ರ ಬಿಡುಗಡೆಗಾಗಿ ಪ್ರಾರ್ಥನೆ ಸಲ್ಲಿಸಿ, ನವ ಚಂಡಿಕಾ ಯಾಗವನ್ನು ಪ್ರಾರಂಭಿಸಿದ್ದಾರೆ.ಕೊಲೆ ಪ್ರಕರಣದಲ್ಲಿ ಬಂಧಿತರಾಗಿ ಜೈಲಿನಲ್ಲಿ ಇರುವ ದರ್ಶನ್ ಅವರ ಪರವಾಗಿ ದೇವಿಗೆ ಪ್ರಾರ್ಥನೆ ಸಲ್ಲಿಸಿರುವ ವಿಜಯಲಕ್ಷ್ಮಿ ಅವರು ಶುಕ್ರವಾರ ಬೆಳಿಗ್ಗೆ ಕ್ಷೇತ್ರದ ಅರ್ಚಕರ ಮೂಲಕ ನಡೆಯುವ ನವಚಂಡಿಕಾ ಯಾಗದ ಪೂರ್ಣಾವತಿಯಲ್ಲಿ ಪಾಲ್ಗೊಳ್ಳಲಿದ್ದಾರೆ.
