ಉದಯವಾಹಿನಿ, ಬೆಂಗಳೂರು: ನಗರದಲ್ಲಿ ಇಂದು ಸುರಿದಂತ ಆಲಿಕಲ್ಲು ಸಹಿತ ಭಾರೀ ಮಳೆಯಿಂದಾಗಿ ಅವಾಂತರಲೇ ಸೃಷ್ಠಿಯಾಗಿದೆ. ಈ ಸುದ್ದಿ ತಿಳಿಯುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ ಅವರು ಕೆ ಆರ್ ಸರ್ಕಲ್ ಅಂಡರ್ ಪಾಸ್ ನಲ್ಲಿ ಕಾರು ಸಿಲುಕಿ, ಅವಾಂತರ ಉಂಟಾಗಿದ್ದಂತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಬೆಂಗಳೂರಿನ ಮಳೆ ಅವಂತಾರದ ಬಗ್ಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸಿಎಸ್ ವಂದಿತಾ ಶರ್ಮಾ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರಿಂದ ಮಾಹಿತಿಯನ್ನು ಪಡೆದರು.ಈ ಬಳಿಕ ಕೆ ಆರ್ ಸರ್ಕಲ್ ಬಳಿಯ ಅಂಡರ್ ಪಾಸ್ ನಲ್ಲಿ ಕಾರಿನಲ್ಲಿ ಆರು ಮಂದಿ ಸಿಲುಕಿ, ಅವರನ್ನು ಸ್ಥಳೀಯರು, ಅಗ್ನಿಶಾಮಕ ಸಿಬ್ಬಂದಿ ರಕ್ಷಿಸಿದ ವಿಷಯ ತಿಳಿದುಕೊಂಡರು. ಅಲ್ಲದೇ ಓರ್ವ ಮಹಿಳೆ ಅಸ್ವಸ್ಥರಾಗಿ ಸೆಂಟ್ ಮಾರ್ಥಾಸ್ ಆಸ್ಪತ್ರೆಗೆ ದಾಖಲಾಗಿರುವ ವಿಷಯ ತಿಳಿದು ಇದೀಗ ಆಸ್ಪತ್ರೆಗೆ ಭೇಟಿ ನೀಡಿ, ವೈದ್ಯರಿಂದ ಅಸ್ವಸ್ಥ ಮಹಿಳೆಯ ಆರೋಗ್ಯದ ಮಾಹಿತಿ ಪಡೆಯುತ್ತಿದ್ದಾರೆ.ಇದೇ ವೇಳೆ ಸ್ಥಳದಲ್ಲಿದ್ದಂತ ಕುಟುಂಬಸ್ಥರಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸಾಂತ್ವಾನ ಹೇಳಿದರು. ಅಲ್ಲದೇ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
