ಉದಯವಾಹಿನಿ, ಬೆಂಗಳೂರು: ಇತ್ತೀಚಿನ ರಾಜಕೀಯ ಬೆಳವಣಿಗೆ ಹಿನ್ನೆಲೆಯಲ್ಲಿ ಹೈಕಮಾಂಡ್‌ ನಾಯಕರನ್ನು ಭೇಟಿ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ನಾಳೆ ದೆಹಲಿಗೆ ಭೇಟಿ ನೀಡುತ್ತಿದ್ದಾರೆ.
ಈ ಬಗ್ಗೆ ಖಚಿತಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಪಕ್ಷ ಹಾಗೂ ಸರ್ಕಾರದ ಬಗ್ಗೆ ಚರ್ಚೆ ನಡೆಸಲು ಹೈಕಮಾಂಡ್‌ ನಾಯಕರು ಆಹ್ವಾನ ನೀಡಿದ್ದಾರೆ. ನಾನು, ಉಪಮುಖ್ಯಮಂತ್ರಿಯವರು ದೆಹಲಿಗೆ ಭೇಟಿ ನೀಡುತ್ತಿದ್ದೇವೆ ಎಂದು ತಿಳಿಸಿದ್ದಾರೆ. ಮುಡಾ ಪ್ರಕರಣವನ್ನು ಮುಂದಿಟ್ಟುಕೊಂಡು ಬಿಜೆಪಿ ಮತ್ತು ಜೆಡಿಎಸ್‌‍ ಬೆಂಗಳೂರಿನಿಂದ ಮೈಸೂರಿನವರೆಗೆ ಪಾದಯಾತ್ರೆ ನಡೆಸುತ್ತಿದೆ. ಇದರ ಜೊತೆಗೆ ಮಹರ್ಷಿ ವಾಲೀಕಿ ಅಭಿವೃದ್ಧಿ ನಿಗಮದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೋಟಿಸ್‌‍ ನೀಡಲು ಮುಂದಾಗಿದೆ. ಈ ಮೂಲಕ ಕರ್ನಾಟಕದಲ್ಲಿರುವ ಕಾಂಗ್ರೆಸ್‌‍ ಸರ್ಕಾರವನ್ನು ಅಸ್ಥಿರಗೊಳಿಸಲು ನಡೆಯುತ್ತಿರುವ ಹುನ್ನಾರ ಎಂಬ ಟೀಕೆಗಳು ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌‍ ಹೈಕಮಾಂಡ್‌ ರಾಜ್ಯ ನಾಯಕರ ಜೊತೆ ಚರ್ಚೆ ನಡೆಸಲು ಮುಂದಾಗಿದೆ. ಒಂದು ವೇಳೆ ಜಾರಿ ನಿರ್ದೇಶನಾಲಯ ನೋಟಿಸ್‌‍ ನೀಡಿದರೆ ಅನುಸರಿಸಬೇಕಾದ ಕಾರ್ಯತಂತ್ರಗಳ ಬಗ್ಗೆ ರಣನೀತಿ ರೂಪಿಸುವ ಸಲುವಾಗಿ ಹೈಕಮಾಂಡ್‌ ಸಮಾಲೋಚನೆ ನಡೆಸಲಿದೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *

error: Content is protected !!