ಉದಯವಾಹಿನಿ, ಬೆಂಗಳೂರು: ದಿನಾಂಕ 22-05-2023 ರಿಂದ 24-05-2023ರವರೆಗೆ ವಿಧಾನಸೌಧದಲ್ಲಿ ವಿಶೇಷ ಅಧಿವೇಷನ ನಡೆಯಲಿದೆ. ಈ ಹಿನ್ನಲೆಯಲ್ಲಿ ವಿಧಾನಸೌಧದ ಸುತ್ತಾಮುತ್ತ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.ಈ ಕುರಿತಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಆದೇಶ ಹೊರಡಿಸಿದ್ದು, ನಾಳೆಯಿಂದ ಮೇ.24ರವರೆಗೆ ವಿಧಾನಸೌಧದಲ್ಲಿ ವಿಶೇಷ ಅಧಿವೇಶನ ನಡೆಯಲಿದೆ.ಈ ಸಮಯದ್ಲಲಿ ವಿವಿಧ ರಾಜಕೀಯ ಪಕ್ಷಗಳು, ಸಂಘಟನೆಗಳು ತಮ್ಮ ಬೇಡಿಕೆಗಳಿಗೆ ಒತ್ತಾಯಿಸಿ ಮೆರವಣಿಗೆ, ಪ್ರತಿಭಟನೆ, ಧರಣಿ, ಸತ್ಯಾಗ್ರಹ, ವಿಧಾನಸೌಧಕ್ಕೆ ಮುತ್ತಿಗೆ ಸೇರಿದಂತೆ ವಿವಿಧ ಪ್ರತಿಭಟನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಸಾಧ್ಯತೆ ಇರುತ್ತದೆ ಎಂದಿದ್ದಾರೆ.ಪ್ರತಿಭಟನಾ ಕಾರ್ಯಕ್ರಮಗಳ ಕಾರಣ ಅಧಿವೇಶನದ ಕಾರ್ಯ, ಕಲಾಪಗಳಿಗೆ ಅಡಚಣೆ ಉಂಟಾಗುವುದಲ್ಲದೇ, ಸಾರ್ವಜನಿಕರ ನೆಮ್ಮದಿಗೆ ಭಂಗ ಹಾಗೂ ಸುಗಮ ಸಂಚಾರಕ್ಕೆ ತೊಂದರೆಯುಂಟಾಗುವ ಸಾಧ್ಯತೆಗಳು ಇರುವುದಾಗಿ ಗುಪ್ತವಾರ್ತೆ ಮಾಹಿತಿಯಿಂದ ತಿಳಿದುಬಂದಿರುತ್ತದೆ ಎಂದು ತಿಳಿದ್ದಾರೆ.ಈ ಹಿನ್ನಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡಲು 144 ಸೆಕ್ಷನ್ ಅನ್ವಯ ದಿನಾಂಕ 22-05-2023 ರಿಂದ ದಿನಾಂಕ 24-05-2023ರವರೆಗೆ ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12ಗಂಟೆಯವರೆಗೆ ಬೆಂಗಳೂರು ನಗರದ ವಿಧಾನಸೌಧ ಕಟ್ಟಡದ ಸುತ್ತಲೂ ಎರಡು ಕಿಲೋಮೀಟರ್ ವ್ಯಾಪ್ತಿಯಲ್ಲಿ, ಅನುಮತಿ ಪಡೆದು ಫ್ರೀಡಂ ಪಾರ್ಕ್ ನಲ್ಲಿ ನಡೆಸುವ ಪ್ರತಿಭಟನೆಗಳನ್ನು ಹೊರತುಪಡಿಸಿ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶಿಸಿದ್ದಾರೆ.
