ಉದಯವಾಹಿನಿ, ಬೆಂಗಳೂರು: ಮದ್ಯ ಪ್ರಿಯರಿಗೆ ಮತ್ತೆ ಬೆಲೆ ಏರಿಕೆ ಬಿಸಿ ತಟ್ಟಿದೆ ಬಿಯರ್ ಮೇಲೆ ತೆರಿಗೆ ಹೆಚ್ಚಿಸಲಾಗಿದ್ದು,ಇದರಿಂದ ಇಂದಿನಿಂದಲೇ ಬೆಲೆ 10 ರಿಂದ 20 ರೂಪಾಯಿ ಏರಿಕೆಯಾಗಲಿದೆ.ರಾಜ್ಯದಲ್ಲಿ ಅಬಕಾರಿ ಇಲಾಖೆ ಕಳೆದ 17 ತಿಂಗಳಲ್ಲಿ 5ನೇ ಬಾರಿಗೆ ಬಿಯರ್ ಬೆಲೆ ಏರಿಕೆಯಾಗಿದೆ. ಒಂದು ತಿಂಗಳ ಹಿಂದೆಯಷ್ಟೆ ಕಚ್ಚಾ ವಸ್ತುಗಳ ಬೆಲೆ ಏರಿಕೆ ಕಾರಣ ನೀಡಿ ಮದ್ಯ ತಯಾರಿಕೆ ಕಂಪನಿಗಳು ದರ ಏರಿಸಿತ್ತು ಆದರೆ ಈಗ ಮತ್ತೆ ಹೆಚ್ಚಿಸಲಾಗಿದೆ 1 ವರ್ಷದಲ್ಲಿ ಸರಿ ಸುಮಾರು 50ರಿಂದ 60 ರೂ.ವರೆಗೆ ಏರಿಕೆಯಾಗಿದೆ.
ಸರ್ಕಾರ ಈ ಹಿಂದೆ ಬಿಯರ್ ಮೇಲೆ ಶೇ.20ರಷ್ಟು ಹೆಚ್ಚುವರಿ ಸುಂಕ ವಿಧಿಸಿತ್ತು. ಆ ನಂತರ ಉತ್ಪಾದನಾ ವೆಚ್ಚ ಸರಿದೂಗಿಸಿಕೊಳ್ಳಲು ಬಿಯರ್ ಕಂಪನಿಗಳು ಫೆಬ್ರವರಿ ತಿಂಗಳಲ್ಲಿ ಬಿಯರ್ ಬೆಲೆ 10 ರೂ.ವರೆಗೆ ಏರಿಕೆ ಮಾಡಿತ್ತು. ಈಗ ಕಂಪನಿಗಳು ಕಚ್ಚಾ ವಸ್ತುಗಳ ಬೆಲೆ ಏರಿಕೆ ಕಾರಣ ನೀಡಿ ಬಿಯರ್ ದರ ಏರಿಕೆ ಮಾಡಿವೆ. ಈ ಮೂಲಕ 15 ತಿಂಗಳ ಅಂತರದಲ್ಲಿ ಬಿಯರ್ ಬೆಲೆ ಸುಮಾರು 50 ರಿಂದ 60 ರೂ. ವರೆಗೆ ಹೆಚ್ಚಳವಾದಂತಾಗಿದೆ. ಕೆಲವು ಕಂಪನಿಗಳ ಬಿಯರ್ ದರ ಕಳೆದ ಗುರುವಾರದಿಂದ ಏರಿಕೆಯಾಗಿದೆ. ಇನ್ನು ಕೆಲವು ಕಂಪನಿಗಳ ಪರಿಷ್ಕೃತ ದರ ಮಂಗಳವಾರ, ಬುಧವಾರದಿಂದ ಜಾರಿಯಾಗಲಿದೆ. ಎಲ್ಲ ಬ್ರ್ಯಾಂಡ್‌ಗಳ ಬಿಯರ್ ಬೆಲೆ ಪ್ರತಿ ಬಾಟಲಿಗೆ 10 ರಿಂದ 20 ರೂಪಾಯಿವರೆಗೆ ಹೆಚ್ಚಳವಾಗಿದೆ.
