ಉದಯವಾಹಿನಿ, ಚಿಟಗುಪ್ಪ: ನಿರ್ಣ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪೋಷಕರ ಸಭೆ ಪ್ರಾಂಶುಪಾಲ ವಿಜಯಕುಮಾರ್ ನೇತೃತ್ವದಲ್ಲಿ ಸೋಮವಾರ ಪೋಷಕರ ಸಭೆ ನಡೆಯಿತು.
ಸಭೆಯಲ್ಲಿ ಮಾತನಾಡಿದ ಪೋಷಕರು, ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕಟ್ಟಡದಲ್ಲಿ ಶುದ್ಧವಾದ ಕುಡಿಯುವ ಕೊರತೆ ಇದೆ.
ನಿರ್ಣ ಮೊರಾರ್ಜಿ ದೇಸಾಯಿ ವಸತಿ ಶಾಲೆಗಾಗಿ ಸರ್ಕಾರದ ನೂತನ ಕಟ್ಟಡದ ಕಾಮಗಾರಿ ಏಕೆ ವಿಳಂಬವಾಗುತ್ತಿದೆ ಎಂದು ಪ್ರಶ್ನಿಸಿದರು.
ಈ ಬಗ್ಗೆ ಸ್ಪಷ್ಟನೆ ನೀಡಿದ ಪ್ರಾಂಶುಪಾಲರು ಸ್ಥಳ ನಿಗದಿವಾಗಿದೆ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದೇವೆ ಆದಷ್ಟು ಬೇಗ ಕಟ್ಟಡದ ಕಾಮಗಾರಿ ಪ್ರಾರಂಭಿಸಲು ಪ್ರಯತ್ನ ಮಾಡಲಾಗುವುದು ಎಂದರು
ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಶಿಕ್ಷಕರು ಪ್ರಭು ಪ್ರೇಮ್ ಸುರೇಶ್ ಅರ್ಜುನ್ ಸುಲೇಚನ ಗಣೇಶ್ ಪ್ರಿಯಾಂಕ ಉಪಸ್ಥಿತರಿದ್ದರು.
