ಉದಯವಾಹಿನಿ, ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಸಚಿವ ಸಂತೋಷ್‌ ಲಾಡ್‌ ಅವರು ಪ್ರವಾಹ ಪೀಡಿತ ವಯನಾಡಿಗೆ ತೆರಳಿದ್ದಾರೆ.ಪ್ರವಾಹ ಪೀಡಿತ ಪ್ರದೇಶದಲ್ಲಿ ಪರಿಹಾರ ಕಾರ್ಯಗಳು, ಸಂತ್ರಸ್ಥರ ರಕ್ಷಣೆ ಸೇರಿದಂತೆ ಅಗತ್ಯ ಎಲ್ಲಾ ರೀತಿಯ ನೆರವುಗಳಿಗೆ ಕೇರಳ ಸರ್ಕಾರದ ಜೊತೆ ಕೈ ಜೋಡಿಸಿ ಜನರ ಜೀವ, ಆರೋಗ್ಯ ರಕ್ಷಣೆಗೆ ನೆರವಾಗುವಂತೆ ಮುಖ್ಯಮಂತ್ರಿಗಳು ದೂರವಾಣಿ ಮೂಲಕ ಸೂಚನೆ ನೀಡಿದ್ದಾರೆ.ದೂರವಾಣಿ ಕರೆ ಸ್ವೀಕರಿಸುತ್ತಿದ್ದಂತೆ ವಯನಾಡಿಗೆ ಹೊರಟ ಸಚಿವ ಸಂತೋಷ್‌ ಲಾಡ್‌ ಸದ್ಯ ಕೇರಳ ರಾಜ್ಯದ ಮುಖ್ಯಮಂತ್ರಿ ಕಚೇರಿ ಜೊತೆ ನಿರಂತರ ಸಂಪರ್ಕದಲ್ಲಿದ್ದಾರೆ.
ದುರಂತದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ತುರ್ತು ಮತ್ತು ಕ್ಷಿಪ್ರ ಕ್ರಮಗಳನ್ನು ಕೈಗೊಳ್ಳಲು ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ. ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಸಚಿವ ಲಾಡ್‌ ತಿಳಿಸಿದ್ದಾರೆ. ಭೂ ಕುಸಿತದಿಂತ ತತ್ತರಿಸಿರುವ ಕೇರಳಕ್ಕೆ ಅಗತ್ಯ ನೆರವು ಒದಗಿಸುವುದಾಗಿ ಆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ದೂರವಾಣಿ ಮೂಲಕ ಪಿಣರಾಯಿ ವಿಜಯನ್‌ ಅವರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು ದುರಂತದ ಬಗ್ಗೆ ಆಘಾತ ವ್ಯಕ್ತಪಡಿಸಿದರು. ಪರಿಹಾರ ಕಾರ್ಯದಲ್ಲಿ ನಮ ಸರ್ಕಾರ ನಿಮೊಂದಿಗೆ ಕೈ ಜೋಡಿಸಲಿದೆ. ಅಗತ್ಯ ನೆರವು ಒದಗಿಸಲು ಸಿದ್ಧವಾಗಿದೆ. ರಕ್ಷಣಾ ತಂಡಗಳು ಮತ್ತು ಸಾಮಗ್ರಿಗಳನ್ನು ಕಳುಹಿಸಲಾಗುತ್ತಿದೆ ಎಂದು ಸಿದ್ದರಾಮಯ್ಯ ಅವರು ತಿಳಿಸಿದರು.

Leave a Reply

Your email address will not be published. Required fields are marked *

error: Content is protected !!