ಉದಯವಾಹಿನಿ, ವಯನಾಡ್ (ಕೇರಳ):  ಕೇರಳದ ವಯನಾಡ್ ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಮೃತರ ಸಂಖ್ಯೆ ಕನಿಷ್ಠ 243ಕ್ಕೆ ಏರಿಕೆಯಾಗಿದೆ. ಇನ್ನೂ 249 ಮಂದಿ ಕಾಣೆಯಾಗಿದ್ದಾರೆ.ಇವರೆಗೆ ಮೃತರಲ್ಲಿ 77 ಪುರುಷರು, 67 ಮಹಿಳೆಯರು ಮತ್ತು 22 ಮಕ್ಕಳು ಸೇರಿದಂತೆ 96 ಸಂತ್ರಸ್ತರನ್ನು ಗುರುತಿಸಲಾಗಿದೆ.166 ದೇಹಗಳು ಮತ್ತು 49 ದೇಹದ ಭಾಗಗಳ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಒಟ್ಟು 75 ಮೃತದೇಹಗಳನ್ನು ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆ. ಜೊತೆಗೆ 200ಕ್ಕೂ ಹೆಚ್ಚು ಜನರು ಸಹ ಗಾಯಗೊಂಡಿದ್ದಾರೆ. ವಿವಿಧ ಆಸ್ಪತ್ರೆಗಳನ್ನು ಗಾಯಾಳುಗಳನ್ನು ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಇದುವರೆಗೆ 3,000ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದೆ. ಅವರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಈಗಾಗಲೂ ಸಂತ್ರಸ್ತರ ರಕ್ಷಣೆ ಮತ್ತು ಪರಿಹಾರಕ್ಕಾಗಿ ರಕ್ಷಣಾ ಕಾರ್ಯಾಚರಣೆಗಳು ತೀವ್ರಗೊಳಿಸಲಾಗುತ್ತಿದೆ. ಭೂಕುಸಿತ ಪೀಡಿತ ಚೂರಲಲಾ ಹಾಗೂ ಮುಂಡಕ್ಕೈ ನಡುವಿನ ಸಂಪರ್ಕ ಸಂಪೂರ್ಣವಾಗಿ ಕಡಿತವಾಗಿದೆ.
ದುರಂತ ಪೀಡಿತ ಚುರಲಲದಲ್ಲಿ ಸೇನೆ ನಿರ್ಮಿಸುತ್ತಿರುವ ತಾತ್ಕಾಲಿಕ ಬೈಲಿ ಸೇತುವೆ ನಿರ್ಮಾಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ. ಇದು ಪೂರ್ಣಗೊಂಡ ಬಳಿಕ ಕಾರ್ಯಾಚರಣೆಗೆ ಇನ್ನಷ್ಟು ವೇಗ ದೊರೆಯಲಿದೆ. ಚೂರಲಲಾದಲ್ಲಿ ಭಾರತೀಯ ಸೇನೆಯು ತಾತ್ಕಾಲಿಕ ಬೈಲಿ ಸೇತುವೆ ನಿರ್ಮಿಸುವ ಕೆಲಸ ಆರಂಭಿಸಿದೆ. ಸೇನೆಯ ಎಂಜಿನಿಯರಿಂಗ್ ಘಟಕವಾದ ಮದ್ರಾಸ್ ಇಂಜಿನಿಯರ್ ಗ್ರೂಪ್ (ಎಂಇಜಿ) ಸೇತುವೆ ನಿರ್ಮಾಣ ಮಾಡುತ್ತಿದ್ದು, ಇದು ಪೂರ್ಣಗೊಳ್ಳುವತ್ತ ಸಾಗಿದೆ.
ವಯನಾಡ್ನಲ್ಲಿ ಸೋಮವಾರ-ಮಂಗಳವಾರದ ಮಧ್ಯರಾತ್ರಿಯಲ್ಲಿ ಎರಡು ಭಾರಿ ವಿನಾಶಕಾರಿ ಭೂಕುಸಿತಗಳು ಉಂಟಾಗಿವೆ. ನಾಲ್ಕು ಗ್ರಾಮಗಳ ಸಂಪೂರ್ಣವಾಗಿ ನೀರು ಹಾಗೂ ಮಣ್ಣು ಪಾಲಾಗಿವೆ. ನೂರಾರು ಮನೆಗಳು, ಸಂಪರ್ಕ ರಸ್ತೆಗಳು ಕೊಚ್ಚಿಕೊಂಡು ಹೋಗಿವೆ.ಭಾರತೀಯ ಸೇನೆಯು ತನ್ನ ಇಂಜಿನಿಯರ್ ಘಟಕದ ನೆರವಿನೊಂದಿಗೆ ತಾತ್ಕಾಲಿಕ ಬೈಲಿ ಸೇತುವೆ ನಿರ್ಮಾಣದಲ್ಲಿ ತೊಡಗಿದೆ. ಈ ಬಗ್ಗೆ ಪುಣೆಯ ದಕ್ಷಿಣ ಕಮಾಂಡ್ ಕಚೇರಿಯು ಸಾಮಾಜಿಕ ಜಾಲತಾಣ ಎಕ್‌್ಸನಲ್ಲಿ ಮಾಹಿತಿ ಹಂಚಿಕೊಂಡಿದೆ. ಪ್ರತಿಕೂಲ ಹವಾಮಾನ, ಹೆಚ್ಚುತ್ತಿರುವ ನೀರಿನ ಮಟ್ಟಗಳು ಮತ್ತು ರಾತ್ರಿಯಿಡೀ ಕೆಲಸ ಮಾಡುವ ಸವಾಲುಗಳ ಹೊರತಾಗಿಯೂ ಮದ್ರಾಸ್ ಇಂಜಿನಿಯರ್ಸ್ ತಂಡವು ಚೂರಲಲಾದಲ್ಲಿ ಕಠಿಣ ಪರಿಶ್ರಮ ಮತ್ತು ಪಟ್ಟುಬಿಡದೆ ಸೇತುವೆ ನಿರ್ಮಾಣ ಪೂರ್ಣಗೊಳಿಸುವತ್ತ ಸಾಗುತ್ತಿದೆ ಎಂದು ಪೋಸ್ಟ್ ಮಾಡಿದೆ.

Leave a Reply

Your email address will not be published. Required fields are marked *

error: Content is protected !!