ಉದಯವಾಹಿನಿ, ಬೆಂಗಳೂರು: ಇಬ್ಬರು ಯುವಕರ ಹೆಸರನ್ನು ಡೆತ್ ನೋಟ್ ನಲ್ಲಿ ಬರೆದಿಟ್ಟು ಗೃಹಿಣಿಯೊಬ್ಬಳು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ದುರ್ಘಟನೆ ಬಾಗಲಗುಂಟೆಯ ಸಿಡೇದಹಳ್ಳಿಯಲ್ಲಿ ನಡೆದಿದೆ.
ಸಿಡೇದಹಳ್ಳಿಯ ಮಮತಾ (೩೧) ಆತ್ಮಹತ್ಯೆ ಮಾಡಿಕೊಂಡವರು,ಪ್ರತಿನಿತ್ಯ ಬೆಳಿಗ್ಗೆ ಪತಿ ಕೆಲಸಕ್ಕೆ ಹೋದರೆ ಸಂಜೆಯೇ ಮನೆಗೆ ಬರುತ್ತಿದ್ದು,ನಿನ್ನೆ ಬೆಳಿಗ್ಗೆ ಕೆಲಸಕ್ಕೆ ಪತಿ ಹೋದ ನಂತರ ಮನೆಯಲ್ಲಿದ್ದ ಪತ್ನಿ ನೇಣಿಗೆ ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾಗಿದ್ದಾಳೆ.
ಕೆಲಸ ಮುಗಿಸಿಕೊಂಡು ವಾಪಾಸು ಸಂಜೆ ಮನೆಗೆ ಬಂದ ಪತಿ ಎಷ್ಟೇ ಬಾಗಿಲು ಬಡಿದರೂ ಬಂದು ಬಾಗಿಲು ತೆರೆಯಲಿಲ್ಲ. ನಂತರ, ತನ್ನ ಬಳಿ ಇದ್ದ ಮತ್ತೊಂದು ಕೀ ಮೂಲಕ ಬಾಗಿಲು ತೆಗೆದು ಒಳಗೆ ಹೋಗಿ ನೋಡಿದರೆ ಅಲ್ಲಿ ಹೆಂಡತಿ ಫ್ಯಾನಿಗೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ.
ಮಾಹಿತಿ ನೀಡಿದ ತಕ್ಷಣವೇ ಬಾಗಲಗುಂಟೆ ಠಾಣೆ ಪೊಲೀಸರು ಧಾವಿಸಿ ಸ್ಥಳ ಪರಿಶೀಲನೆ ಮಾಡಿದ್ದಾರೆ. ಗೃಹಿಣಿ ಮೃತದೇಹ ಪತ್ತೆಯಾದ ಸ್ಥಳದಲ್ಲಿ ಪೊಲೀಸರಿಗೆ ಡೆತ್ ನೋಟ್ ಪತ್ತೆಯಾಗಿದೆ. ಅದನ್ನು ಪರಿಶೀಲನೆ ಮಾಡಿದ ಪೊಲೀಸರಿಗೆ ಅದರಲ್ಲಿ ಇಬ್ಬರು ಯುವಕರ ಹೆಸರನ್ನು ಉಲ್ಲೇಖ ಮಾಡಿರುವುದು ತಿಳಿದುಬಂದಿದೆ.
ನನ್ನ ಬಗ್ಗೆ ಕೆಟ್ಟದ್ದಾಗಿ ಏನಾದರೂ ಬಂದರೆ ನೀವೆ ಹೊಣೆ ಎಂದು ಇಬ್ಬರು ಯುವಕರ ಹೆಸರು ಬರೆದಿಟ್ಟು ಮಮತಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸದ್ಯ ಮರಣೋತ್ತರ ಪರೀಕ್ಷೆ ಮಾಡಿಸಿ ಮೃತದೇಹವನ್ನು ಪೊಲೀಸರು ಕುಟುಂಬ ಸದಸ್ಯರಿಗೆ ಹಸ್ತಾಂತರ ಮಾಡಿದ್ದಾರೆ. ಈ ಘಟನೆ ಕುರಿತು ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Leave a Reply

Your email address will not be published. Required fields are marked *

error: Content is protected !!