ಉದಯವಾಹಿನಿ, ಬೆಂಗಳೂರು: ಬೆಂಗಳೂರಿನ ಕಲ್ಯಾಣ ಸುರಕ್ಷಾ ಭವನದಲ್ಲಿ ಇಂದು ಜರುಗಿದ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ೪೨ನೇ ಸಭೆಯಲ್ಲಿ ಮಂಡಳಿ ಅಧ್ಯಕ್ಷರು ಹಾಗೂ ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಪಾಲ್ಗೊಂಡಿದ್ದರು
ಸಭೆಯಲ್ಲಿ ಕಾರ್ಮಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಮೊಹಿಸಿನ್, ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭಾರತಿ, ಕಾರ್ಮಿಕ ಇಲಾಖೆಯ ಆಯುಕ್ತರಾದ ಗೋಪಾಲಕೃಷ್ಣ, ಮಂಡಳಿಯ ನೂತನ ಸದಸ್ಯರಾದ ಹೆಚ್.ಜೆ.ರಮೇಶ್, ವಿಜಯಕುಮಾರ್ ಪಾಟೀಲ್, ಯುತ ಜಾನಿ, ಶ್ರೇಯಾನ್ಸ್, ಕವಿತಾ ರೆಡ್ಡಿ ಸೇರಿದಂತೆ ಭಾರತ ಸರ್ಕಾರದ ಕಾರ್ಮಿಕ ಇಲಾಖೆಯ ಪ್ರತಿನಿಧಿ, ಲೋಕೋಪಯೋಗಿ ಇಲಾಖೆಯ ಪ್ರತಿನಿಧಿ, ಬಿಬಿಎಂಪಿ, ಆರ್ಥಿಕ ಇಲಾಖೆಯ ಪ್ರತಿನಿಧಿಗಳು ಭಾಗವಹಿಸಿದ್ದರು. ನೂತನ ಸದಸ್ಯರಿಗೆ ಅಭಿನಂದಿಸಿ ಮಂಡಳಿಯ ಸಭೆಯನ್ನು ಪ್ರಾರಂಭ ಮಾಡಿದ ಸಚಿವರು ಮಂಡಳಿಯ ಕಾರ್ಯಕ್ಷಮತೆ ಕುರಿತಾಗಿ ಸುದೀರ್ಘವಾದ ಚರ್ಚೆ ನಡೆಸಿದರು.
