ಉದಯವಾಹಿನಿ, ಕರ್ನಾಟಕ ರಾಜ್ಯದ ನೂತನ ಪೊಲೀಸ್ ಮಹಾನಿರ್ದೇಶಕ (ಡಿಜಿ) ಹಾಗೂ ಇನ್ಸ್‌ಪೆಕ್ಟರ್ ಜನರಲ್ ಆಫ್ ಪೊಲೀಸ್ (ಐಜಿಪಿ) ಆಗಿ ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಮೋಹನ್ ಅವರು ಅಧಿಕಾರ ಸ್ವೀಕರಿಸಿದರು.ಸೋಮವಾರ, ಮೇ 22ರಂದು ಬೆಂಗಳೂರಿನ ನೃಪತುಂಗ ರಸ್ತೆಯ ಪೊಲೀಸ್ ಪ್ರಧಾನ ಕಚೇರಿಯಲ್ಲಿ ಅಲೋಕ್ ಮೋಹನ್ ಅವರಿಗೆ ನಿರ್ಗಮಿತ ಡಿಜಿ-ಐಜಿಪಿ ಪ್ರವೀಣ್ ಸೂದ್ ಅವರು ಬ್ಯಾಟನ್ ನೀಡುವ ಮೂಲಕ ಅಧಿಕಾರ ಹಸ್ತಾಂತರ ಮಾಡಿದರು.ಅಧಿಕಾರ ಸ್ವೀಕರಿಸಿದ ನಂತರ ಮಾತನಾಡಿದ ಅಲೋಕ್ ಮೋಹನ್, “ರಾಜ್ಯದ ಡಿಜಿ-ಐಜಿಪಿಯಾಗಿ ಅಧಿಕಾರ ಸ್ವೀಕರಿಸಿದ್ದೇನೆ. ಕರ್ನಾಟಕ ಸರ್ಕಾರಕ್ಕೆ ಧನ್ಯವಾದ ತಿಳಿಸುತ್ತೇನೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಮರ್ಪಕವಾಗಿ ಇದೆ,” ಎಂದು ಹೇಳಿದರು.
