ಉದಯವಾಹಿನಿ, ಬೆಂಗಳೂರು, : 2023ರ ನೂತನ ಸರ್ಕಾರ ಅಧಿಕಾರಕ್ಕೆ ಬಂದ ಹಿನ್ನೆಲೆಯಲ್ಲಿ ಕರ್ನಾಟಕ ವಿಧಾನಸಭೆ ಮೊದಲ ಅಧಿವೇಶನ ಆರಂಭಗೊಂಡಿದ್ದು, ನೂತನ ಶಾಸಕರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಆದರೆ ಈ ವೇಳೆ ನೂತನ ಶಾಸಕರೊಬ್ಬರು ಎಡವಟ್ಟು ಮಾಡಿಕೊಂಡಿದ್ದಾರೆ.ವಿಷಯ ಇಷ್ಟೇ, ಚನ್ನಗಿರಿ ಶಾಸಕ ಶಾಸಕ ಬಸವರಾಜ್ ಶಿವಗಂಗಾ ಡಿಸಿಎಂ ಡಿ.ಕೆ.ಶಿವಕುಮಾರ್ ಹೆಸರಿನ ಮೇಲೆ ಪ್ರಮಾಣ ಸ್ವೀಕಾರ ಮಾಡಿದ್ದಾರೆ. ಇದಕ್ಕೆ ಸದನದಲ್ಲಿ ಇತರೆ ಸದನದ ಸದಸ್ಯರಿಂದ ಆಕ್ಷೇಪ ವ್ಯಕ್ತವಾಯಿತು. ಕೂಡಲೆ ಗೊಂದಲ ಬಗೆಹರಿಸಿದ ಸ್ಪೀಕರ್, ವ್ಯಕ್ತಿ ಹೆಸರಿನ ಮೇಲೆ ಪ್ರಮಾಣ ಮಾಡಿಸದಂತೆ ವಿಧಾನಸಭೆ ಕಾರ್ಯದರ್ಶಿಗೆ ಸೂಚನೆ ನೀಡಿದರು.
