ಉದಯವಾಹಿನಿ, ಮೈಸೂರು: ಯಾರು ನಿವೃತ್ತಿಯಾಗ್ತಾರೆ, ಏನಾಗ್ತಾರೆ ಅಂತಾ ಮುಂದೆ ಗೊತ್ತಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡಸಿದ್ದಾರೆ.ಬಿಜೆಪಿ, ಜೆಡಿಎಸ್ ಪಾದಯಾತ್ರೆಗೆ ಭಾಗಿಯಾಗಲು ಮೈಸೂರಿಗೆ ಆಗಮಿಸಿದ ಯಡಿಯೂರಪ್ಪ ಅವರು ಚಾಮುಂಡೇಶ್ವರಿ ದರ್ಶನ ಪಡೆದು ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಸಿದ್ದರಾಮಯ್ಯ ಅವರು ನನ್ನ ನಿವೃತ್ತಿ ಮಾತನಾಡಿದ್ದಾರೆ ,ಯಾರು ಏನಾಗ್ತಾರೆ ಅಂತಾ ಮುಂದೆ ಗೊತ್ತಾಗುತ್ತದೆ. ಅವರು ನಿವೃತ್ತಿ ಪಡೆಯುವಾಗ ಇನ್ನೊಬ್ಬರ ಬಗ್ಗೆ ಹೇಳೋದು ಸ್ವಾಭಾವಿಕ. ಅರೀಗ ಮನಬಂದಂತೆ ಮಾತಾಡುತ್ತಿದ್ದಾರೆ, ಮಾತಾಡಲಿ ಎಂದು ಗುಡುಗಿದರು.
ಮೂರು ಲಕ್ಷಕ್ಕೂ ಅಧಿಕ ಜನ ನಮ್ಮ ಬೃಹತ್ ಸಮಾವೇಶದಲ್ಲಿ ಭಾಗವಹಿಸುತ್ತಾರೆ. ಪಾದಯಾತ್ರೆಗೆ ಜನರಿಂದ ಉತ್ತಮ ಪ್ರತಿಕ್ರಿಯೆ ಸಿಕ್ತಾ ಇದೆ. ಭ್ರಷ್ಟ ಸರ್ಕಾರ ಕಿತ್ತೋಗೆಯಲು ಪಾದಯಾತ್ರೆ ಮಾಡ್ತಾ ಇದ್ದೀವಿ. ಸರ್ಕಾರದ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ ಎಂದರು.
