ಉದಯವಾಹಿನಿ, ಬೆಂಗಳೂರು: ಬೆಂಗಳೂರು ಸೇರಿ ರಾಜ್ಯದ ವಿವಿಧ ಭಾಗಗಳಲ್ಲಿ ಮುಂದಿನ 2 ದಿನಗಳ ಕಾಲ ಗುಡುಗು ಸಹಿತ ಮಹಿಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮ ನಗರದಲ್ಲಿ ಇಂದು ಭಾರೀ ಮಳೆ ಮುನ್ಸೂಚನೆ ಇದೆ.
ರಾಜಧಾನಿಯಲ್ಲಿ ಎರಡು ದಿನ ಮಳೆ ಸಾಧ್ಯತೆ ಇದೆ.ದಕ್ಷಿಣ ಒಳನಾಡು ಸೇರಿದಂತೆ ಕರಾವಳಿ ಭಾಗದಲ್ಲಿ ಇಂದು ಮಳೆ ಮುನ್ಸೂಚನೆ ನೀಡಲಾಗಿದ್ದು, ಈಗಾಗ್ಲೇ ಸಿಟಿಯಲ್ಲಿ ಮೋಡ ಕವಿದ ವಾತಾವರಣ ನಿರ್ಮಾಣವಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ರಾಯಚೂರು, ಯಾದಗಿರಿ, ಬೆಳಗಾವಿ, ಧಾರವಾಡ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ, ದಾವಣಗೆರೆ, ಹಾಸನ, ಕೋಲಾರ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ನೀಡಿದೆ.
