ಉದಯವಾಹಿನಿ, ಬೆಂಗಳೂರು: ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಕೊಚ್ಚಿ ಹೋಗಿರುವ ಘಟನೆಗೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಗ್ರಾಮಸ್ಥರು ಆತಂಕ ಪಡುವ ಅಗತ್ಯವಿಲ್ಲ. ಪ್ರವಾಹವುಂಟಾಗುವುದಿಲ್ಲ ಎಂದು ಹೇಳಿದ್ದಾರೆ.ತುಂಗಭದ್ರಾ ಡ್ಯಾಂ ನ 19ನೇ ಗೇಟ್ ನ ಚೈನ್ ಲಿಂಕ್ ಕಟ್ಟಾಗಿದೆ.
ರಿಪೇರಿ ಮಾಡಬಹುದು ಎಂದು ಕೆಲವರು ಹೇಳುತ್ತಿದ್ದಾರೆ. ತಜ್ಞರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ. ತಜ್ಞರು ಭೇಟಿ ನೀಡಿ ಮಾಹಿತಿ ತಿಳಿಸುವವರೆಗೂ ಏನೂ ಹೇಳಲು ಆಗುವುದಿಲ್ಲ. ಆದರೆ ಗ್ರಾಮಸ್ಥರು ಆತಂಕ ಪಡುವ ಅಗತ್ಯವಿಲ್ಲ ಎಂದರು.
ಈಗಾಗಲೇ ಸರ್ಕಾರ ಮುಂಜಾಗೃತಾ ಕ್ರಮವಾಗಿ ಎಲ್ಲಾ ರೀತಿ ಸಿದ್ಧತೆ ಮಾಡಿಕೊಂಡಿದೆ. ಸುತ್ತಮುತ್ತಲಿನ ಗ್ರಾಮಸ್ಥರಿಗೂ ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ನದಿಯ ಬಳಿ ಹೋಗದಂತೆ ಹೇಳಲಾಗಿದೆ. ತಜ್ಞರ ತಂಡದಿಂದ ಡ್ಯಾಂ ಪರಿಶೀಲನೆ ಬಳಿಕ ಸ್ಪಷ್ಟತೆ ಸಿಗಲಿದೆ ಎಂದು ಹೇಳಿದರು.

Leave a Reply

Your email address will not be published. Required fields are marked *

error: Content is protected !!