ಉದಯವಾಹಿನಿ , ಶಿವಮೊಗ್ಗ: ತೀವ್ರ ಹಣಾಹಣಿಗೆ ಕಾರಣವಾಗಿದ್ದ ಇಲ್ಲಿನ ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳ ವ್ಯಾಪ್ತಿಯ ಶಿವಮೊಗ್ಗ ಹಾಲು ಒಕ್ಕೂಟದ (ಶಿಮುಲ್‌) ಆಡಳಿತ ಮಂಡಳಿ ಚುನಾವಣೆ ಬುಧವಾರ ಶಾಂತಿಯುತವಾಗಿ ನಡೆಯಿತು. 14 ಮಂದಿ ನೂತನ ನಿರ್ದೇಶಕರನ್ನೊಳಗೊಂಡ ಆಡಳಿತ ಮಂಡಳಿ ಅಸ್ತಿತ್ವಕ್ಕೆ ಬಂದಿತು.ಶಿವಮೊಗ್ಗ ಜಿಲ್ಲೆಯಲ್ಲಿ ಕಾಂಗ್ರೆಸ್ ಬೆಂಬಲಿತರು ಮೇಲುಗೈ ಸಾಧಿಸಿದರು.
ಮಾಚೇನಹಳ್ಳಿಯ ಶಿಮುಲ್ ಕೇಂದ್ರ ಕಚೇರಿ ಆವರಣದಲ್ಲಿ ನಡೆದ ಚುನಾವಣೆಯಲ್ಲಿ ಶಿವಮೊಗ್ಗ ವಿಭಾಗದಿಂದ ಭದ್ರಾವತಿ ತಾಲ್ಲೂಕಿನ ಕಾಚಗೊಂಡನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವನ್ನು ಪ್ರತಿನಿಧಿಸಿದ್ದ ಡಿ.ಆನಂದ್, ಶಿವಮೊಗ್ಗ ತಾಲ್ಲೂಕಿನ ಬುಳ್ಳಾಪುರ ಹಾಲು ಉತ್ಪಾದಕರ ಸಹಕಾರ ಸಂಘದ ಎಚ್.ಬಿ.ದಿನೇಶ್ ಹಾಗೂ ತೀರ್ಥಹಳ್ಳಿ ತಾಲ್ಲೂಕು ಕಲ್ಲುಕೊಪ್ಪ ಹಾಲು ಉತ್ಪಾದಕರ ಸಹಕಾರ ಸಂಘವನ್ನು ಪ್ರತಿನಿಧಿಸಿದ್ದ ಆರ್.ಎಂ.ಮಂಜುನಾಥಗೌಡ ಗೆಲುವು ಸಾಧಿಸಿದರು.
ಸಾಗರ ವಿಭಾಗ: ಶಿಕಾರಿಪುರ ತಾಲ್ಲೂಕಿನ ಹಿರೇಜಂಬೂರು ಹಾಲು ಉತ್ಪಾದಕರ ಸಹಕಾರ ಸಂಘದ ಪ್ರತಿನಿಧಿ ಆಗಿದ್ದ ಟಿ.ಶಿವಶಂಕರಪ್ಪ, ಸೊರಬ ತಾಲ್ಲೂಕಿನ ತ್ಯಾವಗೋಡು ಹಾಲು ಉತ್ಪಾದಕರ ಸಹಕಾರ ಸಂಘದ ಟಿ.ಎಸ್.ದಯಾನಂದಗೌಡ ಹಾಗೂ ಹೊಸನಗರ ತಾಲ್ಲೂಕು ಕಾರ್ಗಡಿ ಹಾಲು ಉತ್ಪಾದಕರ ಸಹಕಾರ ಸಂಘದ ಪ್ರತಿನಿಧಿ ಎನ್.ವಿದ್ಯಾಧರ ಗೆಲುವಿನ ನಗೆ ಬೀರಿದರು.ದಾವಣಗೆರೆ ವಿಭಾಗ: ದಾವಣಗೆರೆ ತಾಲ್ಲೂಕು ಬಿ.ಕಲಪನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವನ್ನು ಪ್ರತಿನಿಧಿಸಿದ್ದ ಚೇತನ್ ಎಸ್.ನಾಡಿಗರ, ಹರಿಹರ ತಾಲ್ಲೂಕು ಹನಗವಾಡಿ ಹಾಲು ಉತ್ಪಾದಕರ ಸಹಕಾರ ಸಂಘದ ಜಗದೀಶಪ್ಪ ಬಣಕಾರ, ಚನ್ನಗಿರಿ ತಾಲ್ಲೂಕು ಕಂಚುಗಾರನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಎಚ್.ಕೆ.ಬಸಪ್ಪ ಹಾಗೂ ಹೊನ್ನಾಳಿ ತಾಲ್ಲೂಕಿನ ಎಂ.ಹನುಮನಹಳ್ಳಿ ಹಾಲು ಉತ್ಪಾದಕರ ಸಂಘದ ಪ್ರತಿನಿಧಿ ಬಿ.ಜಿ.ಬಸವರಾಜಪ್ಪ ಗೆಲುವು ಸಾಧಿಸಿದರು.

Leave a Reply

Your email address will not be published. Required fields are marked *

error: Content is protected !!