ಉದಯವಾಹಿನಿ, ಬೆಂಗಳೂರು : ರಾಜ್ಯದ ನೂತನ ಡಿಸಿಎಂ ಆಗಿರುವ ಡಿ.ಕೆ ಶಿವಕುಮಾರ್ ಇದೀಗ ಸಿದ್ದರಾಮಯ್ಯ ಅವರ ಅದೃಷ್ಟದ ನಿವಾಸ ಮೇಲೆ ಕಣ್ಣಿಟ್ಟಿದ್ದಾರೆ.ಸಿದ್ದರಾಮಯ್ಯ ಅವರ ಅದೃಷ್ಟದ ನಿವಾಸ ಡಿ.ಕೆ ಶಿವಕುಮಾರ್ ತನಗೆ ಬೇಕೆಂಬ ಬೇಡಿಕೆಯಿಟ್ಟಿದ್ದಾರೆ ಎಂದು ಆಪ್ತ ಮೂಲಗಳಿಂದ ತಿಳಿದುಬಂದಿದೆ.ಸಿದ್ದರಾಮಯ್ಯ ಹಾಲಿ ಇರುವ ಕುಮಾರಕೃಪಾ ಅವರ ಅದೃಷ್ಟದ ನಿವಾಸವಾಗಿದೆ. ಈ ಹಿಂದೆ ಸಿಎಂ ಆಗಿದ್ದಾಗಲೂ ಸಿದ್ದರಾಮಯ್ಯ ಇದೇ ನಿವಾಸದಲ್ಲಿದ್ದರು, 5 ವರ್ಷ ಯಶಸ್ವಿಯಾಗಿ ಅಧಿಕಾರ ಪೂರೈಸಿದರು. ಈಗಲೂ ಅದೇ ಮನೆಯಲ್ಲಿದ್ದಾರೆ. ಆದರೀಗ ಕಾವೇರಿ ನಿವಾಸಕ್ಕೆ ತೆರಳುತ್ತಿರುವ ಹಿನ್ನೆಲೆಯಲ್ಲಿ ಡಿಕೆಶಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ ಎನ್ನಲಾಗಿದೆ. ಆಪ್ತರನ್ನ ಕಳುಹಿಸಿ ಸರ್ಕಾರಿ ಬಂಗಲೆ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.ಸಿದ್ದರಾಮಯ್ಯ ಅವರಿಗೆ ಅದೃಷ್ಟ ತಂದ ನಿವಾಸ ನನಗೂ ಅದೃಷ್ಟ ತರುತ್ತೆ ಎಂಬ ನಂಬಿಕೆಯಲ್ಲಿ ಇದ್ದಾರೆ. ಆದರೆ ಇದಕ್ಕೆ ಸಿದ್ದರಾಮಯ್ಯ ಅವರು ಒಪ್ಪುತ್ತಾರಾ? ಅದೃಷ್ಟದ ಮನೆ ಬಿಟ್ಟು ಕಾವೇರಿ ನಿವಾಸಕ್ಕೆ ಹೋಗುತ್ತಾರಾ ಎನ್ನುವುದನ್ನು ಕಾದು ನೋಡಬೇಕಿದೆ.
