ಉದಯವಾಹಿನಿ, ಬೆಂಗಳೂರು: ದೇಶಕ್ಕಾಗಿ ಹೋರಾಡಿದ ಸ್ವಾತಂತ್ರ್ಯ ಹೋರಾಟಗಾರರನ್ನು ಮತ್ತು ಹುತಾತ್ಮರಾದ ವೀರ ಯೋಧರನ್ನು ಸ್ಮರಿಸುವುದರ ಮೂಲಕ ಅವರ ತ್ಯಾಗ ಬಲಿದಾನದಿಂದ ನಮಗೆ ಸ್ವಾತಂತ್ರ್ಯ ಲಭಿಸಿದ್ದು, ಅದನ್ನು ನಾವೆಲ್ಲರೂ ಸದುಪಯೋಗಪಡಿಸಿಕೊಳ್ಳಬೇಕು ಹಾಗೂ ದೇಶದ ಅಭಿವೃದ್ಧಿಗೆ ಎಲ್ಲರೂ ಪ್ರಾಮಾಣಿಕತೆಯಿಂದ ಶ್ರಮಿಸಬೇಕೆಂದು ದಿ ಮೈಸೂರ್ ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಎಸ್ ಮನೋಹರ್ ತಿಳಿಸಿದರು.
ದಿ ಮೈಸೂರ್ ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಸಂಸ್ಥೆಯ ಆವರಣದಲ್ಲಿ ಏರ್ಪಡಿಸಿದ್ದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಾಷ್ಟ್ರಪಿತ ಮಹಾತ್ಮ ಗಾಂಧಿ, ಡಾ: ಬಿ.ಆರ್. ಅಂಬೇಡ್ಕರ್, ಸಂಸ್ಥೆಯ ಸ್ಥಾಪಕರಾದ ಎನ್.ಜಿ. ಅಯ್ಯಂಗಾರ್ ಅವರ ಪುತ್ತಳಿಗೆ ಮಾಲಾರ್ಪಣೆ ಮಾಡಿ ಅವರ ಆಶಯಗಳಂತೆ ನಾವು ನಡೆಯಬೇಕು, ಸಂವಿಧಾನ ಹಾಗೂ ಪ್ರಜಾಪ್ರಭುತ್ವದ ಉಳಿವಿಗೆ ಎಲ್ಲರೂ ಪಣತೊಡಬೇಕು ಎಂದು ತಿಳಿಸಿ, ಸಂವಿಧಾನ ಹಾಗೂ ಪ್ರಜಾಪ್ರಭುತ್ವ ಎರಡು ದೇಶಕ್ಕೆ ಅತ್ಯಂತ ಶಕ್ತಿಶಾಲಿ ಅದನ್ನ ಬಲಪಡಿಸುವುದೇ ನಾಗರೀಕರಾದ ನಮ್ಮ ಜವಾಬ್ದಾರಿ ಎಂದು ತಿಳಿಸಿದರು.
ಪ್ರಸ್ತುತ ದೇಶದಲ್ಲಿ ನಿರುದ್ಯೋಗ ಸಂಖ್ಯೆ ಹೆಚ್ಚುತ್ತಿದೆ ಅದಕ್ಕೆ ಕಡಿವಾಣ ಹಾಕಬೇಕು ಮತ್ತು ಹೆಚ್ಚಿನ ಉದ್ಯೋಗ ಸೃಷ್ಟಿಸಬೇಕು, ಈ ನಿಟ್ಟಿನಲ್ಲಿ ನಾವೆಲ್ಲ ಕಾರ್ಯ ನಿರ್ವಹಿಸಿದಾಗ ಮಾತ್ರ ನಿರುದ್ಯೋಗ ನಿವಾರಣೆಯಾಗಿ ದೇಶದ ಅಭಿವೃದ್ಧಿ ಹೆಚ್ಚುತ್ತದೆ ಹಾಗೂ ಬಡತನವು ಸಹ ನಿರ್ಮೂಲನೆ ಆಗುತ್ತದೆ, ಅದಕ್ಕೆ ನಾವೆಲ್ಲರೂ ಹೆಚ್ಚಿನ ಪರಿಶ್ರಮವನ್ನು ಪಡಬೇಕು ಎಂದು ತಿಳಿಸಿದರು. ದೇಶದ ಅಭಿವೃದ್ಧಿಗೆ ಪ್ರತಿಯೊಬ್ಬ ನಾಗರೀಕರು ಕೂಡ ಶ್ರಮಿಸುವುದರ ಮೂಲಕ ದೇಶದ ಸ್ವಾತಂತ್ರ್ಯವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಇದೇ ಸಂದರ್ಭದಲ್ಲಿ ಕರೆ ನೀಡಿದರು. ಕರ್ಣಾಟಕ ಅಂಧರ ಶಾಲೆಗೆ ಮಕ್ಕಳಿಗೆ ಹಾಗೂ ಬಡವರಿಗೆ ಉಚಿತವಾಗಿ ಉಡುಪುಗಳನ್ನ ವಿತರಿಸಲಾಯಿತು. ಸ್ವಾತಂತ್ರ್ಯ ದಿನಾರಣೆ ಕಾರ್ಯಕ್ರಮದಲ್ಲಿ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಶ್ರೀಧರ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.
