ಉದಯವಾಹಿನಿ,  ನವದೆಹಲಿ: ಕೇಂದ್ರ ಚುನಾವಣಾ ಆಯೋಗ(ಇಸಿಐ) ಜಮ್ಮು ಮತ್ತು ಕಾಶ್ಮೀರ ಹಾಗೂ ಹರಿಯಾಣ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಶುಕ್ರವಾರ ಪ್ರಕಟಿಸಿದೆ. ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿ ಪ್ರದೇಶ ಎಂದು ಘೋಷಿಸಿದ ನಂತರ ಮೊದಲ ಬಾರಿಗೆ ವಿಧಾನಸಭೆ ಚುನಾವಣೆ ಎದುರಿಸುತ್ತಿದ್ದು, ಸೆಪ್ಟೆಂಬರ್ 18, ಸೆಪ್ಟೆಂಬರ್ 25 ಮತ್ತು ಅಕ್ಟೋಬರ್ 1 ರಂದು ಮೂರು ಹಂತದಲ್ಲಿ ಮತದಾನ ನಡೆಯಲಿದೆ. ದೆಹಲಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು, “ನಾವು ಇತ್ತೀಚೆಗೆ ಜಮ್ಮು ಮತ್ತು ಕಾಶ್ಮೀರ ಹಾಗೂ ಹರಿಯಾಣಕ್ಕೆ ಭೇಟಿ ನೀಡಿ, ಚುನಾವಣಾ ಸಿದ್ಧತೆಗಳನ್ನು ಪರಿಶೀಲಿಸಿದ್ದೇವೆ. ಜನರಲ್ಲಿ ಹೆಚ್ಚಿನ ಉತ್ಸಾಹ ಕಂಡುಬಂದಿದೆ. ಅವರು ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸಲು ಬಯಸಿದ್ದಾರೆ. ಜನರು ಚುನಾವಣೆಗಳನ್ನು ಬಯಸುತ್ತಾರೆ ಎಂದರು.

90 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಜಮ್ಮು ಮತ್ತು ಕಾಶ್ಮೀರದಲ್ಲಿ ಮೂರು ಹಂತಗಳಲ್ಲಿ ಮತದಾನ ನಡೆಯಲಿದೆ ಎಂದು ರಾಜೀವ್ ಕುಮಾರ್ ಅವರು ತಿಳಿಸಿದರು.ಇದೇ ವೇಳೆ 90 ವಿಧಾನಸಭಾ ಕ್ಷೇತ್ರಗಳಿರುವ ಹರಿಯಾಣಕ್ಕೂ ಚುನಾವಣೆ ಘೋಷಿಸಿದ ರಾಜೀವ್ ಕುಮಾರ್ ಅವರು, ಅಕ್ಟೋಬರ್‌ 1 ರಂದು ಹರಿಯಾಣದ ವಿಧಾನಸಭೆ ಚುನಾವಣೆ ನಡೆಯಲಿದ್ದು, ಎರಡೂ ರಾಜ್ಯಗಳ ಮತ ಎಣಿಕೆ ಅಕ್ಟೋಬರ್‌ 4 ರಂದು ನಡೆಯಲಿದೆ ಎಂದರು. ಹರಿಯಾಣದಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಸೆಪ್ಟೆಂಬರ್ 12ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಸೆಪ್ಟೆಂಬರ್ 16ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ.2019 ರಲ್ಲಿ ಜಮ್ಮು ಕಾಶ್ಮೀರ ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿ ಸಂವಿಧಾನದ 370ನೇ ವಿಧಿಯಲ್ಲಿ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಲಾಗಿತ್ತು. ಅಂದಿನಿಂದ ಜಮ್ಮು ಮತ್ತು ಕಾಶ್ಮೀರವು ಲೆಫ್ಟಿನೆಂಟ್ ಗವರ್ನರ್ ಆಳ್ವಿಕೆಯಲ್ಲಿದೆ.

 

Leave a Reply

Your email address will not be published. Required fields are marked *

error: Content is protected !!